ಬಸವರಾಜ ಬೊಮ್ಮಾಯಿ 
ರಾಜ್ಯ

ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸರು ಕ್ರಮ ಕೈಗೊಳ್ಳುವಂತೆ ಮಾಡಬೇಡಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಜೂನ್ 14ನೇ ತಾರೀಖಿನ ನಂತರ ಅನ್ ಲಾಕ್ ಪ್ರಕ್ರಿಯೆ ಆರಂಭವಾಗುತ್ತಿದ್ದರೂ ಇಂದಿನಿಂದಲೇ ಅನ್ ಲಾಕ್ ಆದಂತೆ ಜನರು ವರ್ತಿಸುವುದು ಸರಿಯಲ್ಲ, ಪೊಲೀಸರಿಗೆ ಸಹಕಾರ ನೀಡಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಬೆಂಗಳೂರು: ಜೂನ್ 14ನೇ ತಾರೀಖಿನ ನಂತರ ಅನ್ ಲಾಕ್ ಪ್ರಕ್ರಿಯೆ ಆರಂಭವಾಗುತ್ತಿದ್ದರೂ ಇಂದಿನಿಂದಲೇ ಅನ್ ಲಾಕ್ ಆದಂತೆ ಜನರು ವರ್ತಿಸುವುದು ಸರಿಯಲ್ಲ, ಪೊಲೀಸರಿಗೆ ಸಹಕಾರ ನೀಡಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜನರು ಕೊರೋನಾ ತಡೆಗೆ ಸ್ವಯಂ ನಿಯಂತ್ರಣ ಮಾಡಬೇಕು, ಪೊಲೀಸರು ಕಾನೂನನ್ನು ಕೈಗೆತ್ತಿಕೊಳ್ಳುವ ಅವಕಾಶ ಬರಬಾರದು, ಪೊಲೀಸರು ಹಿಡೀತಿಲ್ಲ ಎಂದು ಕೇರ್ ಲೆಸ್ ಮಾಡಬೇಡಿ, ರಸ್ತೆಯಲ್ಲಿ ಪೊಲೀಸರು ತಡೆಯದಿದ್ದರೂ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗುವುದರಿಂದ ಕೇಸು ದಾಖಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜೂನ್ 14ರಿಂಗ ಲಾಕ್ ಡೌನ್  ನಿಯಮಗಳನ್ನು ಪರಿಷ್ಕರಿಸಿ ಸರ್ಕಾರ ಹೊಸ ಮಾರ್ಗಸೂಚಿಯನ್ನು ನಿನ್ನೆ ಪ್ರಕಟಿಸಿದೆ. ಬೆಂಗಳೂರು ಸೇರಿದಂತೆ ಕೊರೋನಾ ಸಕ್ರಿಯ ಪ್ರಕರಣಗಳು ಕಡಿಮೆಯಿರುವ ಜಿಲ್ಲೆಗಳಲ್ಲಿ ಹಲವು ಸೇವೆಗಳಿಗೆ ರಿಯಾಯಿತಿ ನೀಡಲಾಗಿದೆ. ಅಗತ್ಯ ವಸ್ತುಗಳ ಸೇವೆ ವಹಿವಾಟಿಗೆ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.

ಇಂದು ಬೆಂಗಳೂರು ನಗರದಲ್ಲಿ ಜನರು ಅನ್ ಲಾಕ್ ಆದಂತೆ ವರ್ತಿಸುತ್ತಿದ್ದರು, ಬಹುತೇಕ ಕಡೆ 11 ಗಂಟೆಯಾದರೂ ಜನರು ರಸ್ತೆಗಳಲ್ಲಿ ಸಂಚರಿಸುತ್ತಲೇ ಇದ್ದರು, ಹಲವು ಕಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ