ರಾಜ್ಯ

ಸಾಹಿತಿ ಸಿದ್ದಲಿಂಗಯ್ಯ ನಿಧನ: ಪ್ರಧಾನಿ ಮೋದಿ ಸಂತಾಪ

Srinivasamurthy VN

ನವದೆಹಲಿ: ಹಿರಿಯ ಸಾಹಿತಿ ಸಿದ್ದಲಿಂಗಯ್ಯ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಸಾಹಿತ್ಯ ಲೋಕಕ್ಕೆ ಅವರ ಕೊಡುಗೆ ಅಪಾರ ಎಂದು ಹೇಳಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, 'ಡಾ. ಸಿದ್ದಲಿಂಗಯ್ಯ ಅವರ ಬರಹಗಳು, ಕವನಗಳು ಮತ್ತು ಅವರು ಸಾಮಾಜಿಕ ನ್ಯಾಯಕ್ಕಾಗಿ ನೀಡಿದ ಕೊಡುಗೆ ಅಪಾರವಾದದ್ದು, ಅವರ ನಿಧನ ಸುದ್ದಿ ಬೇಸರ ತರಿಸಿದೆ. ಅಭಿಮಾನಿಗಳು ಮತ್ತು ಕುಟುಂಬಸ್ಥರಿಗೆ ಅಗಲಿಕೆಯ ನೋವು ಭರಿಸುವ ಶಕ್ತಿ ದೊರೆಯಲಿ  ಓಂ ಶಾಂತಿ’ ಎಂದು ಸಂತಾಪ ಸೂಚಿಸಿದ್ದಾರೆ.

ಇತ್ತೀಚಿಗೆ ಕೊರೊನಾ ಸೋಂಕಿತರಾಗಿದ್ದ ಕವಿ ಸಿದ್ದಲಿಂಗಯ್ಯ ಅವರು (67) ಶುಕ್ರವಾರ ಸಂಜೆ ನಿಧನರಾಗಿದ್ದಾರೆ. ಸಿದ್ದಲಿಂಗಯ್ಯ ಅವರಿಗೆ ಕಳೆದ ತಿಂಗಳು ಕೆಮ್ಮು ಮತ್ತು ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು. ಮೇ 2 ರಂದು ಕೊರೊನಾ ಸೋಂಕು  ತಗುಲಿರುವುದು ದೃಢಪಟ್ಟಿತ್ತು. 

ಹೀಗಾಗಿ ಚಿಕಿತ್ಸೆಗಾಗಿ ಬೆಂಗಳೂರಿನ ರಂಗದೊರೈ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ಮೇ 5ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿತ್ತು. ಒಂದು ತಿಂಗಳಿಗೂ ಅಧಿಕ ಕಾಲ ಆಸ್ಪತ್ರೆಯಲ್ಲಿದ್ದ ಅವರು,  ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾರೆ. ಮತರು ಪತ್ನಿ, ಓರ್ವ ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ. 
 

SCROLL FOR NEXT