ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅಪ್ರಾಪ್ತ ಮಕ್ಕಳಿಗೆ ಕಿರುಕುಳ; ತಾಯಿ ಮತ್ತವಳ ಪ್ರಿಯಕರನ ಬಂಧನ

ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ತಾಯಿ ಮತ್ತು ಆಕೆಯ ಪ್ರಿಯಕರನನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ತಾಯಿ ಮತ್ತು ಆಕೆಯ ಪ್ರಿಯಕರನನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

ರಾಜರಾಜೇಶ್ವರಿ ನಗರ ಠಾಣಾ ವ್ಯಾಪ್ತಿಯ ಜಯಮ್ಮ (24) ಹಾಗೂ ಆಕೆ ಪ್ರಿಯಕರ ಹೇಮಂತ್(27)​ ಬಂಧಿತ ಆರೋಪಿಗಳು. ಖಾಸಗಿ ಆಸ್ಪತ್ರೆಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿರುವ ಜಯಮ್ಮ ದಿನಗೂಲಿ ನೌಕರ ಹೇಮಂತ್ ಜೊತೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದಳು.

ಈ ವಿಷಯವನ್ನು ಅಪ್ರಾಪ್ತ ಮಕ್ಕಳು ತನ್ನ ತಂದೆಗೆ ತಿಳಿಸಿದ್ದರು, ಇದರಿಂದ ಕುಪಿತಗೊಂಡ ಜಯಮ್ಮ ಮಕ್ಕಳ ಮೇಲೆ ಉರಿದು ಬಿದ್ದಿದ್ದಾಳೆ. ತನ್ನ ಪ್ರಿಯಕರನ ವಿಷಯ ತಂದೆಗೆ ತಿಳಿಸಿದ್ದಕ್ಕೆ ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾಳೆ.

ಸ್ವಲ್ಪವೂ ಕರುಣೆ ಇಲ್ಲದೆ ಪ್ರಿಯಕರನ ಜೊತೆ ಸೇರಿ ಇಬ್ಬರು ಹೆಣ್ಣು ಮಕ್ಕಳನ್ನು ಮನಬಂದಂತಗೆ ಥಳಿಸಿದ್ದಾಳೆ. ತಾಯಿ, ಪ್ರಿಯಕರ ಇಬ್ಬರು ಮಕ್ಕಳನ್ನು ಕಚ್ಚಿ, ಬೆಂಕಿಯಿಂದ ಸುಟ್ಟು ವಿಕೃತಿ ಮೆರೆದಿದ್ದಾರೆ. ಮಕ್ಕಳು ಕಿರುಚಿಕೊಳ್ಳುತ್ತಿದ್ದ ಶಬ್ದ ಕೇಳಿ ನೆರೆಹೊರೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.  ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!