ಸಂಗ್ರಹ ಚಿತ್ರ 
ರಾಜ್ಯ

ಚಾಮರಾಜನಗರ: ಖಾಸಗಿ ಆಸ್ಪತ್ರೆಯ ನೀರಿನ ತೊಟ್ಟಿಯಲ್ಲಿ ನವಜಾತ ಗಂಡು ಶಿಶು ಶವ ಪತ್ತೆ

ಖಾಸಗಿ ಆಸ್ಪತ್ರೆಯೊಂದರ ನೀರಿನ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ.

ಚಾಮರಾಜನಗರ: ಇಲ್ಲಿ ಖಾಸಗಿ ಆಸ್ಪತ್ರೆಯೊಂದರ ನೀರಿನ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ.

ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

ಸುಮಾರು 6 ದಿನದ ಗಂಡು ಶಿಶು ಇದಾಗಿದ್ದು, ಕರುಳಬಳ್ಳಿ ಕತ್ತರಿಸದೇ ಹಾಗೆ ಬಿಡಲಾಗಿದೆ. ಅಂಗವೈಕಲ್ಯ ಹೊಂದಿರುವ ಕಾರಣ ಹೆತ್ತವರು ಪ್ಲಾಸ್ಟಿಕ್ ಕವರ್‍ನಲ್ಲಿ ಮಗುವನ್ನು ಹಾಕಿ ಬಿಸಾಡಿರಬಹುದು ಎಂದು ಶಂಕಿಸಲಾಗಿದೆ.

ಆಸ್ಪತ್ರೆ ಸಿಬ್ಬಂದಿ ಶವಾಗಾರದ ಬಳಿ ಹೋದಾಗ ದುರ್ನಾತ ಬರುತ್ತಿರುವುದನ್ನು ಗಮನಿಸಿ ಪರಿಶೀಲಿಸಿದಾಗ ಪ್ಲಾಸ್ಟಿಕ್ ಕವರಿನಲ್ಲಿ ಶಿಶು ಶವ ಪತ್ತೆಯಾಗಿದೆ. ಆಸ್ಪತ್ರೆಯಲ್ಲೇ ಹೆರಿಗೆಯಾಗಿದ್ದರೆ ಕರುಳ ಬಳ್ಳಿಯನ್ನು ಕತ್ತರಿಸಲಾಗುತ್ತಿತ್ತು. ಹೀಗಾಗಿ ಆಸ್ಪತ್ರೆಯಲ್ಲಿ ಈ ಮಗು ಹುಟ್ಟಿಲ್ಲ ಎನ್ನಲಾಗಿದೆ. ಸಿಸಿಟಿವಿ ಪರಿಶೀಲಿಸಲಾಗುತ್ತಿದ್ದು ತನಿಖೆ ನಡೆಸಲಾಗುತ್ತಿದೆ.

ಘಟನೆಗೆ ಸಂಬಂಧಿಸಿ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಳೆ ಬಳಿಕ ಸಿಲಿಕಾನ್ ಸಿಟಿ ಕೂಲ್-ಕೂಲ್: 10 ಡಿಗ್ರಿ ಸೆಲ್ಸಿಯಸ್ ತಾಪಮಾನ ಕುಸಿತ; ಮುಂದಿನ 2 ದಿನಗಳೂ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..!

ಬೌರಿಂಗ್ ಆಸ್ಪತ್ರೆ ದುರಂತ: ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆ

IPL 2026: ರಿಕಲ್ಟನ್ ಶತಕ ವ್ಯರ್ಥ; ಮುಂಬೈ ನೀಡಿದ ಟಾರ್ಗೆಟ್ ಧೂಳಿಪಟ, ದಾಖಲೆಯ 249 ರನ್ ಬಾರಿಸಿದ ಗೆದ್ದ SRH!

ಬಾಂಗ್ಲಾದೇಶ ಸರ್ಕಾರ ದೊಡ್ಡ ತಪ್ಪು ಮಾಡಿದೆ... ಟಿ20 ವಿಶ್ವಕಪ್ ಬಗ್ಗೆ ಶಕೀಬ್ ಅಲ್ ಹಸನ್ 'ಸ್ಫೋಟಕ ಹೇಳಿಕೆ'!

IPL 2026: 'ಬ್ಯಾಟಲ್ಲಿ AI Chip ಇದೆ' ಎಂದ ಪಾಕಿಸ್ತಾನದ Nouman Niaz ಗೆ ಬಟ್ಟೆ ಸುತ್ತಿ ಹೊಡೆದ ವೈಭವ್ ಸೂರ್ಯವಂಶಿ

SCROLL FOR NEXT