ಪೋಲೀಸ್ ಠಾಣೆ ಎದುರು ಪ್ರತಿಭಟನೆಯಲ್ಲಿ ತೊಡಗಿದ ನಾಗರಿಕರು 
ರಾಜ್ಯ

ವಿರಾಜಪೇಟೆ ಪೋಲೀಸರಿಂದ ಹಲ್ಲೆಗೊಳಗಾಗಿದ್ದ ಮಾನಸಿಕ ವಿಶೇಷ ಚೇತನ ಸಾವು; ನ್ಯಾಯಕ್ಕಾಗಿ ಠಾಣೆ ಎದುರು ಪ್ರತಿಭಟನೆ

ವಿರಾಜಪೇಟೆ ಪೋಲೀಸರಿಂದ ಥಳಿತಕ್ಕೊಳಗಾಗಿದ್ದ ಮಾನಸಿಕ ವಿಶೇಷ ಚೇತನ ವ್ಯಕ್ತಿ ಶನಿವಾರ ಕೊನೆಯುಸಿರೆಳೆದಿದ್ದಾನೆ.

ಮಡಿಕೇರಿ: ವಿರಾಜಪೇಟೆ ಪೋಲೀಸರಿಂದ ಥಳಿತಕ್ಕೊಳಗಾಗಿದ್ದ ಮಾನಸಿಕ ವಿಶೇಷ ಚೇತನ ವ್ಯಕ್ತಿ ಶನಿವಾರ ಕೊನೆಯುಸಿರೆಳೆದಿದ್ದಾನೆ.

ಈ ಮಧ್ಯೆ ಪ್ರಕರಣದ ವಿಚಾರಣೆಗಾಗಿ ಐಜಿಪಿ ಮಧುಕರ್ ಕೊಡಗಿಗೆ ಆಗಮಿಸಿದ್ದಾರೆ.

ಮಾನಸಿಕ ವಿಶೇಷ ಚೇತನ ಎಪಿಲೆಪ್ಟಿಕ್ (epileptic) ರೋಗಿಯಾಗಿದ್ದ ರಾಯ್ ಡಿಸೋಜಾ ಚಾಕುವನ್ನು ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿದ್ದನು, ಇದನ್ನು ಗಮನಿಸಿದ ನಂತರ ಪೊಲೀಸರು ಅವನ ಮೇಲೆ ಹಲ್ಲೆ ನಡೆಸಿದ್ದಾರೆ.ರಾಯ್ ಮುಖ್ಯ ರಸ್ತೆಯಲ್ಲಿದ್ದಾಗ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ್ದು, ಆತನನ್ನು ವಶಕ್ಕೆ ತೆಗೆದುಕೊಳ್ಳಲು ಕಾರಣವಾಗುದೆ ಎಂದು ಪೊಲೀಸರು ಹೇಳಿದ್ದಾರೆ.

ಆದರೆ, ರಾಯ್ ನನ್ನು ಮೂರು ಗಂಟೆಗಳ ಪೊಲೀಸ್ ಕಸ್ಟಡಿಯಲ್ಲಿ ಹಿಗ್ಗಾ ಮುಗ್ಗಾ ಥಳಿಇಸಿ ಬಳಿಕ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಇದಾದ ನಂತರ ರಾಯ್ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಕೂಡಿ ಮಡಿಕೇರಿ ಆಸ್ಪತ್ರೆಯ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಶನಿವಾರ ಸಾವನ್ನಪ್ಪಿದ್ದಾರೆ. ವಿರಾಜಪೇಟೆ ಪೊಲೀಸರ ವಿರುದ್ಧ ಸಂತ್ರಸ್ತನ ಸಹೋದರ ರಾಬಿನ್ ದೂರು ದಾಖಲಿಸಿದ್ದು, ಅವರು ಎಸ್‌ಪಿ ಕ್ಷಮಾ ಮಿಶ್ರಾ ಅವರಿಗೆ ದೂರು ನೀಡಿದ್ದಾರೆ.

ಏತನ್ಮಧ್ಯೆ ಕಾಂಗ್ರೆಸ್ ಬೆಂಬಲಿತ ವಿರಾಜಪೇಟೆ ನಾಗರಿಕರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಅದಲ್ಲದೆ, ಲಿಖಿತ ದೂರನ್ನು ಕಾಂಗ್ರೆಸ್ ಅಧ್ಯಕ್ಷ ಧರ್ಮಜಾ ಉತ್ತಪ್ಪ ಅವರು ವಿರಾಜ್‌ಪೇಟೆ ಡಿವೈ ಎಸ್‌ಪಿ ಜಯಕುಮಾರ್ ಅವರಿಗೆ ಹಸ್ತಾಂತರಿಸಿದರು. ವಿರಾಜ್‌ಪೇಟೆ ಪಿಎಸ್‌ಐ ಜಗದೀಶ್ ಸೇರಿದಂತೆ ಏಳು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಿವಾಸಿಗಳು ಒತ್ತಾಯಿಸಿದರು ಮತ್ತು ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗದಿದ್ದರೆ ಬೃಹತ್ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT