ರಾಜ್ಯ

ಮುಂಗಾರು ಚುರುಕು: ಇನ್ನೂ 4 ದಿನ ಹಲವೆಡೆ ಮಳೆ ಎಚ್ಚರಿಕೆ

Nagaraja AB

ಬೆಂಗಳೂರು: ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೈರುತ್ಯ  ಮುಂಗಾರು ಚುರುಕುಗೊಂಡಿದ್ದು ಇನ್ನೂ 4 ದಿನ  ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಕುಕ್ಕೆ ಸುಬ್ರಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕಾರ್ಕಳ, ಕೊಟ್ಟಿಗೆಹಾರ, ಬಾಳೆಹೊನ್ನೂರು ಸೇರಿದಂತೆ ವಿವಿಧ ಪ್ರದೇಶದಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ  ಭಾರೀ ಮಳೆಯಾಗಲಿದೆ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.  ಸಮುದ್ರ ಮಟ್ಟದಲ್ಲಿ ಗಂಟೆಗೆ 50 ಕಿಲೋಮೀಟರ್   ವೇಗದಲ್ಲಿ ಗಾಳಿ  ಬೀಸಲಿದ್ದು  ಸಮುದ್ರಕ್ಕೆ ಇಳಿಯದಂತೆ  ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. 

SCROLL FOR NEXT