ರಾಜ್ಯ

ಶಿಕ್ಷಣ ವ್ಯವಸ್ಥೆ ಪುನರುಜ್ಜೀವನಗೊಳಿಸಲು ತಜ್ಞರ ಸಮಿತಿ: ಸಚಿವ ಸುರೇಶ್ ಕುಮಾರ್

Manjula VN

ಬೆಂಗಳೂರು: ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಿಕೊಳ್ಳಲು  ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಲು ಶಿಕ್ಷಣ ಇಲಾಖೆಯು ತಜ್ಞರ ಸಮಿತಿಯೊಂದನ್ನು ರಚಿಸಿದೆ ಎಂದು ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. 

ಈ ಕುರಿತು ಮಾತನಾಡಿಸುವ ಅವರು, ಕೇವಲ ತರಗತಿಗಳು ಮತ್ತು ಪರೀಕ್ಷೆಗಳತ್ತ ಗಮನ ಹರಿಸುವುದಷ್ಟೇ ಅಲ್ಲದೆ, ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಲು ಸಮಗ್ರ ಚಿಂತನೆಯ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ. 

ಈ ಕುರಿತು ಇಲಾಖೆಯು ಸಮಿತಿಯೊಂದನ್ನು ರಚನೆ ಮಾಡಿದ್ದು, ಸಮಿತಿಯು ಉತ್ತಮ ಕಲಿಕೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಅಂಶಗಳನ್ನೂ ಗಮನಿಸಲಿದೆ. ಇದು ಗ್ರಾಮೀಣ ಪ್ರದೇಶಗಳಲ್ಲಿ ತಾಂತ್ರಿಕ ಸಾಧನಗಳ ಬಳಕೆ ಮತ್ತು ವಿದ್ಯಾರ್ಥಿಗಳ ನಿರಂತರ ಮೌಲ್ಯಮಾಪನವನ್ನೂ ಒಳಗೊಂಡಿರುತ್ತದೆ. ಸಮಿತಿಯಲ್ಲಿ ನಿಮ್ಹಾನ್ಸ್‌ನ ತಜ್ಞರು, ಮಕ್ಕಳ ತಜ್ಞರು, ವೈದ್ಯರು ಮತ್ತು ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳಿದ್ದಾರೆಂದು ಮಾಹಿತಿ ನೀಡಿದ್ದಾರೆ.

ಸಮಿತಿಯು ಭವಿಷ್ಯದ ಶಿಕ್ಷಣ ಕುರಿತೂ ಗಮನ ಹರಿಸಲಿದ್ದಾರೆ. ಪ್ರಕ್ರಿಯೆಗಳು ಈಗಷ್ಟೇ ಆರಂಭವಾಗಿದೆ. ಈಗಾಗಲೆ ಕೆಲ ಸಭೆಗಳೂ ನಡೆದಿವೆ ಎಂದು ತಿಳಿಸಿದ್ದಾರೆ. 

ಇದೇ ವೇಳೆ ಎಸ್ಎಸ್ಎಲ್'ಸಿ ಪರೀಕ್ಷೆ ನಡೆಸುವ ನಿರ್ಧಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ಸಂದರ್ಭದಲ್ಲಿ ಮಕ್ಕಳಲ್ಲಿ ಭೀತಿಯುಂಟು ಮಾಡುವ ಬದಲು ಆತ್ಯವಿಶ್ವಾಸ ತುಂಬುವ ಅವಶ್ಯಕತೆಯಿದೆ ಮತ್ತು ಭೀತಿ ಉಂಟುಮಾಡುವುದಲ್ಲ. ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವ ಅವಶ್ಯಕತೆಯಿದೆ ಮತ್ತು ಈ ಬಗ್ಗೆ ಮಕ್ಕಳಿಗೂ ಅರಿವು ಮೂಡಿಸಬೇಕಿದೆ ಎಂದಿದ್ದಾರೆ. 

SCROLL FOR NEXT