ಕೊರೋನಾ ವೈರಸ್ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ: ಬೆಂಗಳೂರಿನಲ್ಲಿ 985 ಸೇರಿ 5,041 ಹೊಸ ಪ್ರಕರಣ ಪತ್ತೆ; 115 ಮಂದಿ ಸಾವು!

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 5,041 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 27,77,010ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 5,041 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 27,77,010ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 115 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 33,148ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 985 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 11,99,143ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 16 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 14,785 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 25,81,559ಕ್ಕೆ ಏರಿಕೆಯಾಗಿದೆ. ಇನ್ನು 1,62,282 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,32,600 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 5,041 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 3.80ಕ್ಕೆ ಇಳಿದಿದೆ.

ಹೊಸ ಪ್ರಕರಣಗಳ ಪೈಕಿ ಬೆಂಗಳೂರು ನಗರದಲ್ಲಿ 985, ಬೆಳಗಾವಿಯಲ್ಲಿ 95, ಬಳ್ಳಾರಿಯಲ್ಲಿ 122, ಚಿಕ್ಕಬಳ್ಳಾಪುರದಲ್ಲಿ 65, ಚಿಕ್ಕಮಗಳೂರು 224, ದಕ್ಷಿಣ ಕನ್ನಡದಲ್ಲಿ 482, ದಾವಣಗೆರೆಯಲ್ಲಿ 183, ಹಾಸನದಲ್ಲಿ 522, ಮೈಸೂರಿನಲ್ಲಿ 490, ಶಿವಮೊಗ್ಗದಲ್ಲಿ 282, ತುಮಕೂರಿನಲ್ಲಿ 329, ಉಡುಪಿಯಲ್ಲಿ 107, ಉತ್ತರ ಕನ್ನಡದಲ್ಲಿ 122 ಪ್ರಕರಣಗಳು ವರದಿಯಾಗಿವೆ.

ಕಳೆದ 24 ತಾಸಿನಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಪೈಕಿ ಬೆಂಗಳೂರು ನಗರದಲ್ಲಿ 16, ಬೆಳಗಾವಿ 3, ಶಿವಮೊಗ್ಗ 5, ಹಾವೇರಿ 3, ಧಾರವಾಡದಲ್ಲಿ 7, ಮೈಸೂರಿನಲ್ಲಿ 26 ಪ್ರಕರಣಗಳು ಸೇರಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

SCROLL FOR NEXT