ಸಿದ್ದರಾಮಯ್ಯ 
ರಾಜ್ಯ

ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವಿನ ಸಂಘರ್ಷ ನಿವಾರಿಸಿ: ಸಿಎಂಗೆ ಸಿದ್ದರಾಮಯ್ಯ ಪತ್ರ

ಖಾಸಗಿ ಶಾಲಾ ಆಡಳಿತ ಮಂಡಳಿಗಳು ಮತ್ತು ಪೋಷಕರು ಪರಸ್ಪರ ಸಂಘರ್ಷಕ್ಕಿಳಿಯುವುದನ್ನು ನೋಡುತ್ತಾ ಕೂರುವುದು ಸರ್ಕಾರದ ಉದಾಸೀನತೆಯನ್ನು ತೋರಿಸುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಬೆಂಗಳೂರು: ಖಾಸಗಿ ಶಾಲಾ ಆಡಳಿತ ಮಂಡಳಿಗಳು ಮತ್ತು ಪೋಷಕರು ಪರಸ್ಪರ ಸಂಘರ್ಷಕ್ಕಿಳಿಯುವುದನ್ನು ನೋಡುತ್ತಾ ಕೂರುವುದು ಸರ್ಕಾರದ ಉದಾಸೀನತೆಯನ್ನು ತೋರಿಸುತ್ತದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಈ ಕೂಡಲೇ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಪೋಷಕರು ಪಾವತಿಸಬೇಕಾದ ರಿಯಾಯಿತಿ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು. ಸರ್ಕಾರದ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಆಗುವಂತೆ ಕ್ರಮ ವಹಿಸಬೇಕು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ತಡೆಹಿಡಿದಿರುವ ವೇತನ ನೀಡಬೇಕು’ ಎಂದೂ ಪತ್ರದಲ್ಲಿ ಆಗ್ರಹಿಸಿದ್ದಾರೆ. ‘ಖಾಸಗಿ ಶಾಲಾ ಆಡಳಿತ ಮಂಡಳಿಗಳು ಬ್ಯಾಂಕ್‍ಗಳಿಗೆ ಪಾವತಿಸಬೇಕಾದ ಕೊರೊನಾ ಅವಧಿಯಲ್ಲಿನ ಸಾಲದ ಮೇಲಿನ ಬಡ್ಡಿ ಮುಂತಾದ ವಿಚಾರಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಅವರಿಗಾಗುವ ಹೊರೆ ತಗ್ಗಿಸಲು ಎಲ್ಲ ಕ್ರಮಗಳನ್ನು
ತೆಗೆದುಕೊಳ್ಳಬೇಕು. ಕೊರೊನಾ ಕಾರಣದಿಂದಾಗಿ ಕಳೆದ ವರ್ಷದಿಂದ ಮಕ್ಕಳು ಶಾಲೆಗಳಿಗೆ ಹೋಗಲು ಸಾಧ್ಯವಾಗಿಲ್ಲ. ತರಗತಿಗಳು ನಡೆಯಲಿಲ್ಲವೆಂದು ಖಾಸಗಿ ಶಾಲೆ-ಕಾಲೇಜುಗಳು ಶಿಕ್ಷಕರಿಗೆ ಸಂಬಳವನ್ನು ನೀಡಿಲ್ಲ.

ಸಂಬಳವಿಲ್ಲದೆ ಸಂಕಷ್ಟ ಅನುಭವಿಸುತ್ತಿರುವ ಶಿಕ್ಷಕರು ನರೇಗಾ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಅನೇಕರು ಹಣ್ಣು, ತರಕಾರಿ ವ್ಯಾಪಾರಿಗಳಾಗಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಖಾಸಗಿ ಶಾಲೆ ಕಾಲೇಜುಗಳು ವಿದ್ಯಾರ್ಥಿಗಳ ಶುಲ್ಕದಲ್ಲಿ ವಿನಾಯಿತಿ ನೀಡಬೇಕೆಂದು ಪೋಷಕರು ಒತ್ತಾಯಿಸುತ್ತಿದ್ದಾರೆ. 

ಪೋಷಕರ ಒತ್ತಾಯಕ್ಕೆ ಮಣಿದ ಸರ್ಕಾರ ಕಳೆದ ವರ್ಷ ಬೋಧನಾ ಶುಲ್ಕದಲ್ಲಿ ಶೇ 30ರಷ್ಟು ವಿನಾಯಿತಿ ನೀಡಿ ಆದೇಶ ಹೊರಡಿಸಿತ್ತು. ಆದರೆ, ಈ ಆದೇಶ ಜಾರಿಗೆ ಬರಲಿಲ್ಲ’ ಎಂದಿದ್ದಾರೆ. ‘ವಾಹನ ಶುಲ್ಕ ಸೇರಿ ಇತರೆ ಶುಲ್ಕವನ್ನೂ ಕಟ್ಟಿಸಿಕೊಳ್ಳಲಾಗಿದೆ. ಇಂಥ ಸಂದರ್ಭದಲ್ಲಿ ಸರ್ಕಾರ ನಿಷ್ಕ್ರಿಯವಾಗಿ ಕೂರುವುದು ಅಸಾಮರ್ಥ್ಯದ, ಲಾಬಿಗೆ ಮಣಿದಿರುವುದರ ಲಕ್ಷಣ. ಸರ್ಕಾರದ ಆದೇಶಕ್ಕೆ ಕಿಮ್ಮತ್ತು ಕೊಡದ ಖಾಸಗಿ ಶಿಕ್ಷಣ ಸಂಸ್ಥೆಗಳ ಕುರಿತು ಯಾವ ಕ್ರಮ ವಹಿಸಲಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಕಳೆದ ವರ್ಷ ಶಾಲೆಗೆ ಮಕ್ಕಳು ಕಾಲಿಡಲು ಸಾಧ್ಯವಾಗದಿದ್ದರೂ ಬಸ್ ಶುಲ್ಕ ವಸೂಲಿ ಮಾಡಿದ ಶಾಲೆಗಳೂ ಇವೆ. ಈ ವರ್ಷವೂ ಇದೇ ಪರಿಸ್ಥಿತಿ ಮುಂದುವರೆದಿದೆ. ಸಾಲದ್ದಕ್ಕೆ ಸರ್ಕಾರ ಶೇ 30ರಷ್ಟು ಶುಲ್ಕ ಕಡಿತ ಮಾಡಿದ್ದು ಹಿಂದಿನ ವರ್ಷಕ್ಕೆ ಮಾತ್ರ, ಈ ವರ್ಷ ಸರ್ಕಾರವೇ ಪೂರ್ಣ ಶುಲ್ಕ ವಸೂಲಿ ಮಾಡಲು ಒಪ್ಪಿಗೆ ಕೊಟ್ಟಿದೆ ಎಂದು ಆಡಳಿತ ಮಂಡಳಿಗಳು ಪೋಷಕರಿಗೆ ಹೇಳುತ್ತಿವೆ. ಹೀಗಾಗಿ, ತಕ್ಷಣ ಸರ್ಕಾರ ಈ ವಿಚಾರದಲ್ಲಿ ತನ್ನ ನಿಲುವು ಏನು ಎನ್ನುವುದನ್ನು ಸ್ಪಷ್ಟಪಡಿಸಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT