ಇಂಡಿಗೋ ವಿಮಾನ 
ರಾಜ್ಯ

ಕಣ್ಣೂರು-ಹುಬ್ಬಳ್ಳಿ ಇಂಡಿಗೋ ವಿಮಾನ ಟೈರ್ ಸ್ಫೋಟ; ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಕೇರಳ ರಾಜ್ಯದ ಕಣ್ಣೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಇಂಡಿಗೋ ವಿಮಾನದ ಟೈರ್ ಲ್ಯಾಂಡಿಂಗ್ ವೇಳೆ ಸ್ಫೋಟಗೊಂಡಿದ್ದು, ಪೈಲಟ್ ಗಳ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.

ಹುಬ್ಬಳ್ಳಿ: ಕೇರಳ ರಾಜ್ಯದ ಕಣ್ಣೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಇಂಡಿಗೋ ವಿಮಾನದ ಟೈರ್ ಲ್ಯಾಂಡಿಂಗ್ ವೇಳೆ ಸ್ಫೋಟಗೊಂಡಿದ್ದು, ಪೈಲಟ್ ಗಳ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.

ಕೇರಳ ರಾಜ್ಯದ ಕಣ್ಣೂರಿನಿಂದ ಸೋಮವಾರ ರಾತ್ರಿ 8.30ಕ್ಕೆ ಬಂದ ಇಂಡಿಗೊ ವಿಮಾನ 6e-7979 ಹಾರ್ಡ್ ಲ್ಯಾಂಡಿಂಗ್ (ಟೈರ್ ನಲ್ಲಿ ಗಾಳಿ ಕಡಿಮೆ ಅಥವಾ ಅಡ್ಡವಾಗಿ ವೇಗವಾಗಿ ಬೀಸಿದ ಗಾಳಿ) ಆಗಿದೆ. ಈ ವೇಳೆ ಟೈರ್ ರನ್ ವೇ ಮೇಲೆ ಸ್ಪರ್ಶ ಮಾಡುತ್ತಿದ್ದಂತೆಯೇ  ಸ್ಫೋಟಗೊಂಡಿದೆ. ಈ ವೇಳೆ ವಿಮಾನ ಕೆಲ ಕ್ಷಣಗಳ ಕಾಲ ಆಯ ತಪ್ಪಿದ್ದು, ಕೂಡಲೇ ಅಪಾಯದ ಮುನ್ಸೂಚನೆ ಅರಿತ ಪೈಲಟ್ ಗಳು ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಪೈಲಟ್‌ ಮೊದಲು ರನ್ ವೇ ದಲ್ಲಿ ಇಳಿಸಲು ಪ್ರಯತ್ನಿಸಿದ್ದಾನೆ. ಆಗದಿಂದಾಗ ಎರಡನೇ ಬಾರಿ ಇಳಿಸಲು ಯತ್ನಿಸಿದಾಗ ಟಾಯರ್ ಬ್ಲಾಸ್ಟ್ ಆಗಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ವಿಮಾನದಲ್ಲಿ ಏಳು ಜನರು ಪ್ರಯಾಣಿಸುತ್ತಿದ್ದರು. ಅವರು ಸುರಕ್ಷಿತವಾಗಿದ್ದಾರೆ. ಈ ವಿಮಾನ 18  ಪ್ರಯಾಣಿಕರನ್ನು ಹೊತ್ತು  ಬೆಂಗಳೂರಿಗೆ ತೆರಳಬೇಕಾಗಿತ್ತು. ಘಟನೆಯಿಂದಾಗಿ ಬೆಂಗಳೂರು ಪ್ರಯಾಣ ರದ್ದುಪಡಿಸಲಾಗಿದೆ. ಬಳಿಕ ಸುಮಾರು 2 ಗಂಟೆ ಹೊತ್ತಿನಲ್ಲಿ ವಿಮಾನವನ್ನು ರನ್ ವೇ ಇಂದ ತೆರವುಗೊಳಿಸಿ, ವಿಮಾನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಟೈರ್ ನಲ್ಲಿ ಗಾಳಿ ಕಡಿಮೆಯಾಗಿದ್ದ ಪರಿಣಾಮ ಒಂದೆಡೆ ಒತ್ತಡ ಉಂಟಾಗಿತ್ತು. ಇದರಿಂದ ಹಾರ್ಡ್ ಲ್ಯಾಂಡಿಂಗ್ ಆಗಿದೆ. ವಿಮಾನ ಹಾರಾಟ ರದ್ದಾಗಿದ್ದರಿಂದ ಕಂಪನಿಯವರು ಅವರಿಗೆಲ್ಲ ಪರ್ಯಾಯ ವ್ಯವಸ್ಥೆ ಮೂಲಕ ಬೆಂಗಳೂರಿಗೆ ಕಳುಹಿಸಿದರು ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ಮಾಹಿತಿ ನೀಡಿರುವ ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ್ ಕುಮಾರ್ ಠಾಕ್ರೆ, 'ಭಾರೀ ಗಾಳಿಯಿಂದಾಗಿ ವಿಮಾನವನ್ನು ಹಾರ್ಡ್ ಲ್ಯಾಂಡಿಂಗ್ ಮಾಡಬೇಕಾಯಿತು. ಇದು ಟೈರ್ ಸ್ಫೋಟಕ್ಕೆ ಕಾರಣವಾಯಿತು. ಘಟನೆಯಿಂದಾಗಿ ರನ್ ವೇ ಮೇಲೆ ಕೆಲವು ಸ್ಕ್ಯಾಚ್  ಗಳಾಗಿದ್ದು ಹೊರತುಪಡಿಸಿದರೆ ರನ್ ವೇಗೆ ಹಾನಿಯಾಗಿಲ್ಲ.  ಮಂಗಳವಾರ ಬೆಳಿಗ್ಗೆ ಇಳಿಯಲು ಬೆಂಗಳೂರು-ಹುಬ್ಬಳ್ಳಿ ವಿಮಾನದ ರನ್ ವೇಯನ್ನು ಮತ್ತೆ ತೆರೆಯುವ ಮೊದಲು ವಿಮಾನ ನಿಲ್ದಾಣದ ಸಿಬ್ಬಂದಿ ಟೈರ್ ಭಾಗಗಳನ್ನು ತೆಗೆದು ಪ್ರದೇಶವನ್ನು ಸ್ವಚ್ಛಗೊಳಿಸಿದರು. 

2015 ರಲ್ಲಿ, ಇದೇ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭಾರಿ ಮಳೆಯಾದ ಕಾರಣ ಬೆಂಗಳೂರಿನ ಸ್ಪೈಸ್‌ಜೆಟ್ ವಿಮಾನವು ರನ್ ವೇ ಯಿಂದ ಜಾರಿತ್ತು. ಅದೃಷ್ಟವಶಾತ್ ಅಂದು ಕೂಡ ಯಾರಿಗೂ ಯಾವ ಅಪಾಯ ಸಂಭವಿಸಿರಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT