ಸಂಗ್ರಹ ಚಿತ್ರ 
ರಾಜ್ಯ

'ರಾಬರ್ಟ್' ನಿರ್ಮಾಪಕ ಹತ್ಯೆ ಯತ್ನ ಪ್ರಕರಣ: ರೌಡಿಶೀಟರ್ ರಾಜೀವ್ ಬಂಧನ

ರಾಬರ್ಟ್ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಅವರ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್ ರಾಜೀವ್ ಅಲಿಯಾಸ್ ಕರಿಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ರಾಬರ್ಟ್ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಅವರ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್ ರಾಜೀವ್ ಅಲಿಯಾಸ್ ಕರಿಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ನೇಪಾಳ ಬಾರ್ಡರ್ ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಕೆ.ಜೆ.ನಗರ ಇನ್ಸ್‌ಪೆಕ್ಟರ್‌ ಚೇತನ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಈತ ಸಿಕ್ಕಿಬಿದ್ದಿದ್ದಾನೆ.

ಕಳೆದ ವರ್ಷ ಉಮಾಪತಿ ಶ್ರೀನಿವಾಸ್​ ಗೌಡ ಮತ್ತು ಅವರ ಸಹೋದರ ದೀಪಕ್​ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ರೌಡಿಶೀಟರ್ ರಾಜೀವ್ ವ್ಯವಸ್ಥಿತ ಸಂಚಿನ ದರೋಡೆ, ಭೂಗತ ಚಟುವಟಿಕೆ ನಡೆಸುತ್ತಿದ್ದನು.

ಪ್ರಕರಣ ಸಂಬಂಧ ಜಯನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು.ಇದಕ್ಕೆ ಹಿಂದೆ ಹನ್ನೊಂದು ಜನರನ್ನು ಪೊಲೀಸರು ಬಂಧಿಸಿದ್ದು ರಾಜೀವ್ ಬಂಧನಕ್ಕಾಗಿ ಎರಡು ತಿಂಗಳಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿದ್ದರು.

ದರ್ಶನ್ ಅಭಿನಯದ ‘ರಾಬರ್ಟ್​’ ಚಿತ್ರವನ್ನು ನಿರ್ಮಿಸಿದ್ದ ಉಮಾಪತಿ ಶ್ರೀನಿವಾಸ್​ ಗೌಡ ಚಿತ್ರದ ಮೂಲಕ ಸಾಕಷ್ಟು ದೊಡ್ಡ ಲಾಭ ಪಡೆದಿದ್ದಾರೆ. ಪ್ರಸ್ತುತ ಅವರು ಶ್ರೀಮುರಳಿ ಅಭಿನಯದ ‘ಮದಗಜ’  ಚಿತ್ರದ ನಿರ್ಮಾಣದಲ್ಲಿ ತೊಡಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel