ರಾಜ್ಯ

ನೋಂದಾಯಿತ ಪ್ರವಾಸಿ ಗೈಡ್ ಗಳಿಗೆ 5 ಸಾವಿರ ರು. ಕೋವಿಡ್ ಪರಿಹಾರ: ಸಿ.ಪಿ. ಯೋಗೇಶ್ವರ್

Shilpa D

ಬೆಂಗಳೂರು: ರಾಜ್ಯ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿಯಾಗಿರುವ ಪ್ರವಾಸಿ ಮಾರ್ಗದರ್ಶಿಗಳಿಗೆ ಕೋವಿಡ್ ಪರಿಹಾರವಾಗಿ 5 ಸಾವಿರ ರೂಪಾಯಿ ನೀಡಲು ನಿರ್ಧಾರ ಕೈಗೊಂಡಿರುವುದಾಗಿ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ತಿಳಿಸಿದ್ದಾರೆ.

ಪ್ರವಾಸೋದ್ಯಮ ಇಲಾಖೆಯಲ್ಲಿ 384 ಪ್ರವಾಸಿ ಗೈಡ್‌ಗಳು ನೋಂದಣಿಯಾಗಿದ್ದಾರೆ. ಅವರಿಗೆ ಕೊರೋನಾ ಸಮಯದಲ್ಲಿ ನೆರವಾಗಲು ನಿರ್ಧರಿಸಿದ್ದೇವೆ. ಪ್ರತಿಯೊಬ್ಬರಿಗೂ ಐದು ಸಾವಿರ ರೂಪಾಯಿ ಬಿಡುಗಡೆ ಮಾಡಲು ಆದೇಶಿಸಲಾಗಿದೆ ಎಂದು ತಿಳಿಸಿದರು.

ಹೋಟೆಲ್ ಕಾರ್ಮಿಕರಿಗೆ ಕೋವಿಡ್ ಪ್ಯಾಕೇಜ್ ಯೋಜನೆಯಡಿ 3 ಸಾವಿರ ರೂಪಾಯಿಗಳನ್ನು ನೀಡುವ ಸಂಬಂಧ ಚರ್ಚೆ ನಡೆಸಲಾಗುತ್ತಿದೆ ಎಂದು ಯೋಗೇಶ್ವರ್ ತಿಳಿಸಿದ್ದಾರೆ.

ಸಭೆಯಲ್ಲಿ ಕೊರೊನಾ ಲಾಕ್‌ಡೌನ್‌ನಿಂದ ಪ್ರವಾಸೋದ್ಯಮ ಕ್ಷೇತ್ರದ ಮೇಲಾಗಿರುವ ಪರಿಣಾಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಈ ತಿಂಗಳ ಅಂತ್ಯಕ್ಕೆ ಪ್ರವಾಸೋದ್ಯಮ ನೀತಿಗೆ ಮಾರ್ಗಸೂಚಿ ರೂಪಿಸಿ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಆದೇಶಿಸಿದರು.

SCROLL FOR NEXT