ಸಾಂದರ್ಭಿಕ ಚಿತ್ರ 
ರಾಜ್ಯ

ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪಿಯುಸಿ ಪರೀಕ್ಷೆ: ನಿಲುವು ತಿಳಿಸಲು ಸರ್ಕಾರಕ್ಕೆ 'ಹೈ' ಸೂಚನೆ

ದ್ವಿತೀಯ ಪಿಯುಸಿ ಅನುತ್ತೀರ್ಣರಾಗಿ ಪುನಃ ಪರೀಕ್ಷೆ ತೆಗೆದುಕೊಂಡಿರುವ 1 ಲಕ್ಷ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸುವುದಾದರೆ, ಮೊದಲ ಬಾರಿಗೆ ಪರೀಕ್ಷೆ ಬರೆಯುವವರಿಗೆ ಪರೀಕ್ಷೆ ನಡೆಸಲು ಏಕೆ ಸಾಧ್ಯವಿಲ್ಲ ಎಂದು ಸರ್ಕಾರಕ್ಕೆ ಪ್ರಶ್ನಿಸಿರುವ ಹೈಕೋರ್ಟ್ ಈ ಕುರಿತು ನಿಲುವು ತಿಳಿಸುವಂತೆ ಸೂಚನೆ ನೀಡಿದೆ. 

ಬೆಂಗಳೂರು: ದ್ವಿತೀಯ ಪಿಯುಸಿ ಅನುತ್ತೀರ್ಣರಾಗಿ ಪುನಃ ಪರೀಕ್ಷೆ ತೆಗೆದುಕೊಂಡಿರುವ 1 ಲಕ್ಷ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸುವುದಾದರೆ, ಮೊದಲ ಬಾರಿಗೆ ಪರೀಕ್ಷೆ ಬರೆಯುವವರಿಗೆ ಪರೀಕ್ಷೆ ನಡೆಸಲು ಏಕೆ ಸಾಧ್ಯವಿಲ್ಲ ಎಂದು ಸರ್ಕಾರಕ್ಕೆ ಪ್ರಶ್ನಿಸಿರುವ ಹೈಕೋರ್ಟ್ ಈ ಕುರಿತು ನಿಲುವು ತಿಳಿಸುವಂತೆ ಸೂಚನೆ ನೀಡಿದೆ. 

ಅನುತ್ತೀರ್ಣರಾಗಿ ಪುನಃ ಪರೀಕ್ಷೆ ತೆಗೆದುಕೊಂಡಿರುವ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಮಾತ್ರ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ, ಈ ವಿಷಯದಲ್ಲಿ ನಿಲುವು ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್ ನೀಡಿದೆ,

ಪ್ರಥಮ ಪಿಯುಸಿ ಅಂಕಗಳನ್ನೇ ಆಧರಿಸಿ ಈ ವಿದ್ಯಾರ್ಥಿಗಳನ್ನೂ ಮುಂದಿನ ತರಗತಿಗೆ ಕಳುಹಿಸಲು ಸಾಧ್ಯವೇ? ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ತನ್ನ ನಿಲುವನ್ನು ಜೂ.17ರೊಳಗೆ ಸ್ಪಷ್ಟಪಡಿಸಬೇಕು ಎಂದು ಸೂಚಿಸಿ ವಿಚಾರಣೆ ಮುಂದೂಡಿದೆ.

‘ಮೊದಲ ಬಾರಿಗೆ ಪರೀಕ್ಷೆ ಬರೆಯುವವರಿಗೆ ಕೋವಿಡ್ ಕಾರಣಕ್ಕೆ ಪರೀಕ್ಷೆ ನಡೆಸದೆ ಪುನರಾವರ್ತಿತ ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಬೇಕು ಎಂಬುದು ತಾರತಮ್ಯ ಆಗಲಿದೆ. ಪ್ರಥಮ ಪಿಯುಸಿ ಅಂಕಗಳನ್ನು ಆಧರಿಸಿ ಅವರನ್ನೂ ಮುಂದಿನ ತರಗತಿಗೆ ಪ್ರವೇಶ ಪಡೆಯಲು ಅವಕಾಶ ನೀಡಿ ಸಮಾನತೆ ಕಾಪಾಡಬೇಕು’ ಎಂದು ಕೋರಿ ಜ್ಞಾನಮಂದಿರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ವಿ. ಶ್ರೀನಿವಾಸಗೌಡ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!