ರಾಜ್ಯ

ಪ್ರವಾಹಕ್ಕೆ ಮುನ್ನೆಚ್ಚರಿಕಾ ಕ್ರಮ: ಮಹಾರಾಷ್ಟ್ರ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಲಿರುವ ಸಿಎಂ ಯಡಿಯೂರಪ್ಪ

Srinivas Rao BV

ಬೆಂಗಳೂರು: ಗಡಿ ಪ್ರದೇಶಗಳಲ್ಲಿ ಕೃಷ್ಣ ಹಾಗೂ ಭೀಮಾ ನದಿ ತೀರಗಳಲ್ಲಿ ಪ್ರವಾಹವನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡುವುದಕ್ಕೆ ಸಿಎಂ ಯಡಿಯೂರಪ್ಪ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವರು ಹಾಗೂ ಉಭಯ ರಾಜ್ಯಗಳ ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. 

ಜೂ.19 ರಂದು ತಮ್ಮ ಗೃಹ ಕಛೇರಿ ಕೃಷ್ಣದಲ್ಲಿ ಭೇಟಿ ನಿಗದಿಯಾಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಮಹಾರಾಷ್ಟ್ರದ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು, ಕರ್ನಾಟಕದ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಜೂ.18 ರಂದು ಸಂಜೆ 5 ಗಂಟೆಗೆ ವಿಕಾಸಸೌಧದಲ್ಲಿ ಸಭೆ ನಡೆಸಲಿದ್ದಾರೆ. ಮೂಲಗಳ ಪ್ರಕಾರ, ಈ ಹಿಂದೆ ರಾಜ್ಯದಲ್ಲಿ ಪ್ರವಾಹ ಉಂಟಾಗಿ ಭಾರಿ ಹಾನಿಯಾಗಿದ್ದ ಹಿನ್ನೆಲೆಯಲ್ಲಿ ಸಿಎಂ ಈ ಬಾರಿ ಮುನ್ನೆಚ್ಚರಿಕಾ ಕ್ರಮವಾಗಿ ಸಭೆ ನಡೆಸಲು ಮುಂದಾಗಿದ್ದಾರೆ. ಪ್ರವಾಹದ ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಸಂದರ್ಭಗಳಲ್ಲಿ ಕೃಷ್ಣಾ ಹಾಗೂ ಭೀಮಾ ನದಿಯ ತೀರದ ಜನರನ್ನು ಸ್ಥಳಾಂತರಿಸಲಾಗುತ್ತದೆ. 

ಬೆಳಗಾವಿಯ ಪ್ರದೇಶದಲ್ಲಿ ಕೃಷ್ಣ ನದಿ ತೀರದಲ್ಲಿ ಪ್ರವಾಹದ ಕಾರಣ ಹಲವು ಗ್ರಾಮಗಳು ಮುಳುಗುವ ಪರಿಸ್ಥಿತಿ ಎದುರಿಸಿವೆ.     
ಮುಂಗಾರು ಪ್ರಾರಂಭವಾದಾಗ ಮಳೆ ಹೆಚ್ಚಾಗುವುದರ ಜೊತೆಗೆ ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ಏಕಾ ಏಕಿ ನೀರು ಬಿಡುಗಡೆಯಾಗುವುದು ಕರ್ನಾಟಕದಲ್ಲಿ ಪ್ರವಾಹಕ್ಕೆ ಮುಖ್ಯ ಕಾರಣವಾಗಿದೆ. ಉಭಯ ರಾಜ್ಯಗಳ ಅಧಿಕಾರಗಳ ನಡುವಿನ ಸಂವಹನದ ಕೊರತೆಯಿಂದ ಕಾರಣದಿಂದಾಗಿ ಈ ಪ್ರವಾಹ ಪರಿಸ್ಥಿತಿ ಉಂಟಾಗಲಿದೆ.    

SCROLL FOR NEXT