ರಾಜ್ಯ

ಅರವಿಂದ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ- ಸಚಿವ ಬೊಮ್ಮಾಯಿ

Manjula VN

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ತಮ್ಮ ಫೋನ್ ಕದ್ದಾಲಿಕೆ ಮಾಡಲಾಗಿದೆ ಎಂದು ಅರವಿಂದ ಬೆಲ್ಲದ್ ಅವರು ಸ್ಪೀಕರ್ ಹಾಗೂ ಡಿಜಿಗೆ ದೂರು ನೀಡಿದ್ದಾರೆ. ಪ್ರಕರಣ ಸಂಬಂಧ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಪ್ರಕರಣದ ತನಿಖೆಯಲ್ಲಿ ಯಾವುದೇ ತಪ್ಪುಗಳಾಗಿರುವುದು ಕಂಡು ಬಂದರೂ, ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. 

ನಿನ್ನೆಯಷ್ಟೇ ಗಂಭೀರ ಆರೋಪ ಮಾಡಿದ್ದ ಅರವಿಂದ ಬೆಲ್ಲದ್ ಅವರು, ನನ್ನ ಫೋನ್ ಕದ್ದಾಲಿಕೆ ಮಾಡಿ ನನ್ನ ಚಲನವಲನಗಳ ಮೇಲೆ ನಿಗಾ ಇರಿಸಲಾಗಿದೆ. ಯಾವುದಾದರೂ ಪ್ರಕರಣದಲ್ಲಿ ಸಿಲುಕಿಸಬೇಕು ಎನ್ನುವ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಹೇಳಿದ್ದರು. 

ಆಲ್ಲದೆ, ಈ ಸಂಬಂಧ ವಿಧಾನಸಭೆಯ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿರುವುದಾಗಿ ತಿಳಿಸಿದ್ದರು. 

SCROLL FOR NEXT