ಕಾಂಗ್ರೆಸ್ ಬಗ್ಗೆ ಅಪಪ್ರಚಾರ: ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು
ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು: ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಾಂಗ್ರೆಸ್ ಪಕ್ಷದ ವಿರುದ್ಧ ಸೂಲಿಬೆಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಹನುಮಂತನಗರ ಬ್ಲಾಕ್ ಕಾಂಗ್ರೆಸ್ ಮುಖಂಡ ತೇಜೇಶ್ ಕುಮಾರ್ ದೂರು ನೀಡಿದ್ದಾರೆ.
ಜೂ. 7 ರಂದು ಸಾಮಾಜಿಕ ಜಾಲತಾಣದಲ್ಲಿ ಒಂದನ್ನು ಹಾಕಿದ್ದ ಚಕ್ರವರ್ತಿ ಸೂಲಿಬೆಲೆ, "ಕಾಂಗ್ರೆಸ್ ಆಕ್ಸಿಜನ್ ಅಕ್ರಮ ದಾಸ್ತಾನು ಮಾಡಿ ಜನರಿಗೆ ಸಿಗದ ಹಾಗೆ ಮಾಡಿತು. ಅಮಾಯಕರ ಸಾವನ್ನು ಸಂಭ್ರಮಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜು ಹಾಕಿತು" ಎಂದಿದ್ದಾರೆ. ಇದು ಸುಳ್ಳಾರೋಪವಾಗಿದ್ದು, ಈ ಮೂಲಕ ಪಕ್ಷಕ್ಕೆ ಕೆಟ್ಟ ಹೆಸರು ತರಿಸಲಾಗುತ್ತಿದೆ ಎಂದು ತೇಜೇಶ್ ಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.