ಸಂಗ್ರಹ ಚಿತ್ರ 
ರಾಜ್ಯ

ಮಂಗಳೂರು: ಇಲಿ ಪಾಷಾಣ ಸೇವಿಸಿದ ಮಾಜಿ ಸೈನಿಕನ ಎರಡೂವರೆ ವರ್ಷದ ಪುತ್ರಿ ಮೃತ್ಯು

ಆಘಾತಕಾರಿ ಘಟನೆಯೊಂದರಲ್ಲಿ ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ ಆಕಸ್ಮಿಕವಾಗಿ ಇಲಿ ಪಾಷಾಣ ಸೇವಿಸಿದ  ಎರಡೂವರೆ ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.

ಮಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ ಆಕಸ್ಮಿಕವಾಗಿ ಇಲಿ ಪಾಷಾಣ ಸೇವಿಸಿದ  ಎರಡೂವರೆ ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.

ಶನಿವಾರ ಈ ಘಟನೆ ನಡೆದಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬಜತ್ತೂರು ಗ್ರಾಮದ ಕೆಮ್ಮಾರು ಮೂಲದ ಮಾಜಿ ಸೈನಿಕ ಶೈಜು ಅವರ ಪುತ್ರಿ ಹೀಗೆ ಇಲಿ ಪಾಷಾಣ ಸೇವಿಸಿ ಮೃತಪಟ್ಟಿದ್ದಾಳೆ.

ತನ್ನ ಮಗಳು ಪೇಸ್ಟ್ ತಿನ್ನುವುದನ್ನು ಕಂಡ ಶೈಜು ಅವರಿಗೆ ಅದು ಇಲಿ ಪಾಷಾಣ ಎಂದು ತಡವಾಗಿ ಅರಿವಾಗಿದೆ. ಇಲಿ ಪಾಷಾಣ ತಿಂದ ಬಾಲಕಿ ವಾಂತಿ ಮಾಡಲು ಪ್ರಾರಂಭಿಸಿದ್ದಾಳೆ. ಅವಳನ್ನು  ಉಪ್ಪಿನಂಗಡಿಯ ಆಸ್ಪತ್ರೆಗೆ ಮತ್ತು ನಂತರ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆ ನಂತರ ಹೆಚ್ಚಿನ ಚಿಕಿತ್ಸೆಗಾಗಿ  ಮಗುವನ್ನು ಮಂಗಳೂರಿಗೆ ಸ್ಥಳಾಂತರಿಸುವಂತೆ ವೈದ್ಯರು ಕುಟುಂಬಕ್ಕೆ ಸಲಹೆ ನೀಡಿದರು.

ಆದರೆ ಅಷ್ಟರಲ್ಲೇ ಮಗುವಿನ ಸ್ಥಿತಿ ಹದಗೆಟ್ಟಿತು ಮತ್ತು ಮಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಆಕೆ ಮೃತಪಟ್ಟಿದ್ದಾಳೆ ಎಂದು ಹೇಳಿದ್ದಾರೆ.

ಘಟನೆ ಸಂಬಂಧ ಉಪ್ಪಿನಂಗಡಿ ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್