ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ 3ನೇ ಅಲೆ: 1.5 ಲಕ್ಷ ಮಕ್ಕಳಿಗೆ ಸೋಂಕು ಸಾಧ್ಯತೆ- ಸರ್ಕಾರಕ್ಕೆ ತಜ್ಞರ ಸಮಿತಿಯಿಂದ ವರದಿ

ರಾಜ್ಯದಲ್ಲಿ ಕೊರೋನಾ 3ನೇ ಅಲೆ ಕಾಲಿಟ್ಟಿದ್ದೇ ಆದರೆ, ಸುಮಾರು ಒಂದೂವರೆ ಲಕ್ಷ ಮಕ್ಕಳಿಗೆ ಸೋಂಕು ತಗಲುವ ಸಾಧ್ಯತೆಗಳಿವೆ ಎಂದು ತಜ್ಞರ ಸಮಿತಿ ಸರ್ಕಾರಕ್ಕೆ ಮಾಹಿತಿ ನೀಡಿದೆ. 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 3ನೇ ಅಲೆ ಕಾಲಿಟ್ಟಿದ್ದೇ ಆದರೆ, ಸುಮಾರು ಒಂದೂವರೆ ಲಕ್ಷ ಮಕ್ಕಳಿಗೆ ಸೋಂಕು ತಗಲುವ ಸಾಧ್ಯತೆಗಳಿವೆ ಎಂದು ತಜ್ಞರ ಸಮಿತಿ ಸರ್ಕಾರಕ್ಕೆ ಮಾಹಿತಿ ನೀಡಿದೆ. 

ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಉನ್ನತ ಮಟ್ಟದ ತಜ್ಞರ ಸಮಿತಿ ರಾಜ್ಯ ಸರ್ಕಾರಕ್ಕೆ ಪ್ರಾಥಮಿಕ ವರದಿ ಸಲ್ಲಿಸಿದ್ದು, ವರದಿಯಲ್ಲಿ ಈ ಕುರಿತ ಮಾಹಿತಿ ನೀಡಿದೆ ಎಂದು ತಿಳಿದುಬಂದಿದೆ. 

ಮೂಲಸೌಕರ್ಯ, ಮಾನವ ಸಂಪನ್ಮೂಲದ ಸಿದ್ಧತೆ, ಐಸಿಯು ಬೆಡ್ ಗಳ ಸಂಖ್ಯೆ ಹೆಚ್ಚಿಸುವುದು ಪ್ರಮುಖವಾಗಿ ಹಾವೇರಿ, ಕೊಪ್ಪಳ ಹಾಗೂ ಉತ್ತರ ಕರ್ನಾಟಕದ ಇತರೆ ಪ್ರದೇಶಗಳಲ್ಲಿ ಮಕ್ಕಳಿಗಾಗಿ ಐಸಿಯು ಬೆಡ್ ಸಂಖ್ಯೆ ಹೆಚ್ಚಿಸುವಂತೆ ಹಾಗೂ ಲಸಿಕೆ ಅಭಿಯಾನದಲ್ಲಿ ಮಾಡಿಕೊಳ್ಳಬೇಕಾದ ಬದಲಾವಣೆಗಳ ಬಗ್ಗೆ ಶನಿವಾರ ರಾಜ್ಯ ಸರ್ಕಾರಕ್ಕೆ ತಜ್ಞರ ಸಮಿತಿ ಪ್ರಾಥಮಿಕ ವರದಿ ಸಲ್ಲಿಸಿದ್ದು, ವರದಿಯಲ್ಲಿ ಮುನ್ನೆಚ್ಚರಿಕೆಗಳನ್ನು ನೀಡಿದೆ ಎಂದು ವರದಿಗಳು ತಿಳಿಸಿವೆ. 

ರಾಜ್ಯದಲ್ಲಿ 10-18 ವರ್ಷದೊಳಿನ 2.3 ಕೋಟಿ ಮಕ್ಕಳಿದ್ದಾರೆ. ಕೊರೋನಾ ಮೊದಲ ಅಲೆಯಲ್ಲಿ 10 ಕ್ಕಿಂತ ಕಡಿಮೆ ವಯಸ್ಸಿನ 70,000 ಕ್ಕೂ ಹೆಚ್ಚು ಮಕ್ಕಳು ಸೋಂಕಿಗೆ ಒಳಗಾಗಿದ್ದರೆ, ಎರಡನೇ ಅಲೆಯಲ್ಲಿ ಮಾರ್ಚ್ 31 ರವರೆಗೆ 1.20 ಲಕ್ಷ ಮಕ್ಕಳು ಸೋಂಕಿಗೊಳಗಾಗಿದ್ದಾರೆ. ಮೂರನೇ ಅಲೆಯಲ್ಲಿ 1.50-2 ಲಕ್ಷ ಮಕ್ಕಳು ಸೋಂಕಿಗೊಳಗಾಗುವ ಸಾಧ್ಯತೆಗಳಿವೆ. ಶೇ.1-2 ರಷ್ಟು ಮಕ್ಕಳು ಗಂಭೀರ ಪರಿಸ್ಥಿತಿಯನ್ನೂ ಎದುರಿಸಬಹುದು. ಹೀಗಾಗಿ 500 ಪಿಐಸಿಯು ಸಂಖ್ಯೆ ಹೆಚ್ಚಿಸಬೇಕು. ಪರಿಸ್ಥಿತಿ ಗಂಭೀರಕ್ಕೆ ಹೋದರೆ, 6000ಕ್ಕೂ ಹೆಚ್ಚಿಸಬೇಕಾಗಿ ಬರಬಹುದು ಎಂದು ಸಮಿತಿ ತಿಳಿಸಿದೆ ಎಂದು ತಿಳಿದುಬಂದಿದೆ. 

ರಾಜ್ಯದ ಇತರೆ ಪ್ರದೇಶಗಳಿಗೆ ಹೋಲಿಕೆ ಮಾಡಿದರೆ ಕೊರೋನಾ ಮೂರನೇ ಅಲೆ ಬೆಂಗಳೂರಿನ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಗಳಿವೆ. ಹೀಗಾಗಿ ಮಾನವ ಶಕ್ತಿ ಹಾಗೂ ಆಕ್ಸಿಜನ್ ಘಟಕಗಳನ್ನು ಹೆಚ್ಚಿಸುವಂತೆ ತಿಳಿಸಿದೆ. 

ತಜ್ಞರ ಸಮಿತಿ ವರದಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಸುಧಾಕರ್ ಅವರು, ಸಮಿತಿಯು ಪ್ರಾಥಣಿಕ ವರದಿಯನ್ನು ಸಿದ್ಧಪಡಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಲ್ಲಿಸಿದೆ. ಅಂತಿಮ ವರದಿ ಸಲ್ಲಿಕೆಯಾದ ಬಳಿಕ 45 ದಿನಗಳೊಳಗೆ ಸಿದ್ಧತೆಗಳನ್ನು ನಡೆಸಲಾಗುತ್ತದೆ. ಜೂನ್.21 ರಂದು ಲಸಿಕಾ ಮೇಳವನ್ನು ನಡೆಸಲಾಗುತ್ತಿದೆ. ಈ ಮೂಲಕ 5-7 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ