ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 1,034 ಸೇರಿ 4,867 ಹೊಸ ಪ್ರಕರಣ ಪತ್ತೆ; 142 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 4,867 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,11,320ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 4,867 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,11,320ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 142 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 34,025ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಇಂದು 1,034 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,06,293ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 28 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 8,404 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 26,54,139ಕ್ಕೆ ಏರಿಕೆಯಾಗಿದೆ. ಇನ್ನು 1,23,134 ಸಕ್ರೀಯ ಪ್ರಕರಣಗಳಿವೆ.
ರಾಜ್ಯಾದ್ಯಂತ ಇಂದು 1,49,731 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 4,867 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 3.25ಕ್ಕೆ ಇಳಿದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.