ರಾಜ್ಯ

ಲಸಿಕೆ ಅಭಿಯಾನದಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ಎರಡನೇ ಸ್ಥಾನ: ಡಾ. ಕೆ.ಸುಧಾಕರ್

Nagaraja AB

ಬೆಂಗಳೂರು: ಕೋವಿಡ್-19 ವಿರುದ್ಧದ ಲಸಿಕೆ ಅಭಿಯಾನದಲ್ಲಿ ನಮ್ಮ ರಾಜ್ಯ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಸಚಿವರು, ಇಂದು ಒಂದೇ ದಿನದಲ್ಲಿ 78 ಲಕ್ಷಕ್ಕೂ ಅಧಿಕ ಮಂದಿಗೆ ಕೋವಿಡ್‌ ಲಸಿಕೆ ನೀಡುವ ಮೂಲಕ ಭಾರತ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಕರ್ನಾಟಕದಲ್ಲಿ 10 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ ಎಂದಿದ್ದಾರೆ.

ರಾಜ್ಯದಲ್ಲಿ ಈವರೆಗೂ ಒಟ್ಟಾರೇ,1.96 ಕೋಟಿ ಲಸಿಕೆ ನೀಡಲಾಗಿದೆ ಎಂದು ಡಾ. ಸುಧಾಕರ್ ಹೇಳಿದ್ದಾರೆ.

SCROLL FOR NEXT