ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 3,709 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,15,029ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 139 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 34,164ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 803 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,07,096ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 26 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 8,111 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 26,62,250ಕ್ಕೆ ಏರಿಕೆಯಾಗಿದೆ. ಇನ್ನು 1,18,592 ಸಕ್ರೀಯ ಪ್ರಕರಣಗಳಿವೆ.
ರಾಜ್ಯಾದ್ಯಂತ ಇಂದು 1,29,099 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 3,709 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 2.87ಕ್ಕೆ ಇಳಿದಿದೆ.