ರಾಜ್ಯ

ಶಿವಮೊಗ್ಗ ವಿಮಾನ ನಿಲ್ದಾಣದ ವಿನ್ಯಾಸ ಬದಲಿಸಿ: ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ

Shilpa D

ಬೆಂಗಳೂರು: ರಾಜಕೀಯ ಪಕ್ಷದ ಚಿಹ್ನೆಯ ಪ್ರಚಾರಕ್ಕೆ ಸಾರ್ವಜನಿಕ ಹಣ ಮತ್ತು ಜಾಗ ಬಳಕೆ ಮಾಡುವುದು ಸರಿಯಲ್ಲ, ಸರ್ಕಾರ ಶಿವಮೊಗ್ಗ ವಿಮಾನ ನಿಲ್ದಾಣದ ವಿನ್ಯಾಸವನ್ನು ಬದಲಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಬೆಂಗಳೂರಿನಲ್ಲಿ ಮಾತನಾಡಿದ ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದ್ದು, ಇದರ ವಿನ್ಯಾಸ ಕಮಲದ ಆಕಾರದಲ್ಲಿದೆ. ಕಮಲ ಯಾವ ಪಕ್ಷದ ಚಿಹ್ನೆ ಎಂದು ಎಲ್ಲರಿಗೂ ಗೊತ್ತಿದೆ. ಪಕ್ಷದ ಚಿಹ್ನೆಗೆ ಪ್ರಚಾರ ನೀಡಲು ಸರ್ಕಾರದ ಹಣ ಬಳಕೆ ಮಾಡುವುದು ಸರಿಯಲ್ಲ. ಈ ವಿನ್ಯಾಸದ ನಿರ್ಮಾಣ ಕೂಡಲೇ ನಿಲ್ಲಿಸಬೇಕು ಹಾಗೂ ಇದನ್ನು ಬದಲಿಸಬೇಕು. ಸರ್ಕಾರದ ಹಣದಲ್ಲಿ ನಿಮ್ಮ ಪಕ್ಷದ ಪ್ರಚಾರ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ’ ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.

ಕಾಮನ್ ಕಾಸ್ ವರ್ಸಸ್ ಬಿಎಸ್ಪಿ ನಡುವಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ 7-7-2016ರಂದು ಒಂದು ತೀರ್ಪು ಕೊಟ್ಟಿದೆ. ಬಿಎಸ್ಪಿಯು ತಮ್ಮ ಪಕ್ಷದ ಚಿಹ್ನೆ ಆನೆ ಆಕಾರದಲ್ಲಿ ಹಲವು ಪ್ರತಿಮೆ ನಿರ್ಮಾಣ ಮಾಡಿದ್ದಾಗ, ರಾಜಕೀಯ ಪಕ್ಷದ ಚಿಹ್ನೆ ಪ್ರಚಾರಕ್ಕೆ ತೆರಿಗೆದಾರರ ಹಣವನ್ನು ಬಳಸುವಂತಿಲ್ಲ ಎಂದು ತೀರ್ಪು ನೀಡಿತ್ತು. ಇನ್ನು ಚುನಾವಣಾ ಆಯೋಗವು, 8-10 2016ರಂದು ಈ ವಿಚಾರವಾಗಿ ಒಂದು ನಿರ್ಣಯ ಕೈಗೊಂಡಿದೆ. 

ಸಾರ್ವಜನಿಕ ಹಣ ಮತ್ತು ಜಾಗವನ್ನು ಬಳಸಿಕೊಂಡು ರಾಜಕೀಯ ಪಕ್ಷ ಅಥವಾ ಅದರ ಚಿಹ್ನೆಗೆ ಪ್ರಚಾರ ನೀಡಿದರೆ, ಅದು ಪಾರದರ್ಶಕ ಚುನಾವಣೆಗೆ ವಿರುದ್ಧವಾದುದ್ದು. 1968ರ ಚುನಾವಣಾ ಚಿಹ್ನೆ ಆದೇಶದ ಪ್ಯಾರಾ 16ರ ನಿಯಮಾವಳಿ ಉಲ್ಲಂಘನೆ ಮಾಡಿದರೆ, ಆ ಪಕ್ಷ ತನ್ನ ಚುನಾವಣೆ ಚಿಹ್ನೆಯನ್ನೆ ಕಳೆದುಕೊಳ್ಳಲಿದೆ. ಹೀಗಾಗಿ ಬಿಜೆಪಿ ಕೂಡಲೇ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಕಮಲದ ವಿನ್ಯಾಸದಲ್ಲಿ ನಿರ್ಮಾಣ ಮಾಡುವುದನ್ನು ನಿಲ್ಲಿಸಬೇಕು. ಒಂದು ವೇಳೆ ನೀವು ಇದನ್ನು ಮುಂದುವರಿಸಿದರೆ ನೀವು ನಿಮ್ಮ ಚಿಹ್ನೆ ಕಳೆದುಕೊಳ್ಳಬೇಕಾಗುತ್ತದೆ ಎಂದು ಈ ಮೂಲಕ ಭಾರತೀಯ ಜನತಾ ಪಕ್ಷಕ್ಕೆ ಎಚ್ಚರಿಕೆ  ನೀಡಿದ್ದಾರೆ.ನೀಡುತ್ತೇವೆ’ ಎಂದರು.

ಶಾಸಕ ಅರವಿಂದ್ ಬೆಲ್ಲದ್ ಅವರ ಫೋನ್ ಟ್ಯಾಪಿಂಗ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಇದೇ ವೇಳೆ ಬ್ರಿಜೇಶ್ ಕಾಳಪ್ಪ ಆಗ್ರಹಿಸಿದ್ದಾರೆ.
 

SCROLL FOR NEXT