ಬಿಎಸ್ ಯಡಿಯೂರಪ್ಪ 
ರಾಜ್ಯ

ಕೋವಿಡ್ ಪ್ಯಾಕೇಜ್: 20,713 ಕಲಾವಿದರಿಗೆ ತಲಾ 3 ಸಾವಿರ ರೂ. ನೆರವು- ಬಿಎಸ್ ಯಡಿಯೂರಪ್ಪ

ಕೊರೋನಾ 2ನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿದ ಕಲಾವಿದರಿಗೆ 3,000 ರೂ.ಗಳ ಆರ್ಥಿಕ ನೆರವು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. 20 ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ನೇರ ಬ್ಯಾಂಕ್ ವರ್ಗಾವಣೆ ವ್ಯವಸ್ಥೆ ಮೂಲಕ ಒಟ್ಟು 6.23 ಕೋಟಿ ರೂ. ನೆರವು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರು: ಕೊರೋನಾ 2ನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿದ ಕಲಾವಿದರಿಗೆ 3,000 ರೂ.ಗಳ ಆರ್ಥಿಕ ನೆರವು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. 20 ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ನೇರ ಬ್ಯಾಂಕ್ ವರ್ಗಾವಣೆ ವ್ಯವಸ್ಥೆ ಮೂಲಕ ಒಟ್ಟು 6.23 ಕೋಟಿ ರೂ. ನೆರವು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಮಂಗಳವಾರ ಕೋವಿಡ್-19ರ 2ನೇ ಅಲೆಯಿಂದ ಸಂಕಷ್ಟದಲ್ಲಿರುವ ಕಲಾವಿದರುಗಳಿಗೆ ಸರ್ಕಾರದಿಂದ ಆರ್ಥಿಕ ನೆರವು ನೀಡಿಕೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಕೊರೋನಾ 2ನೇ ಅಲೆಯಿಂದ ಸಂಕಷ್ಟಕ್ಕೀಡಾದ ದುರ್ಬಲ ವರ್ಗದವರಿಗೆ ಒಟ್ಟು 2,050 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಿದ್ದು, ಈಗಾಗಲೇ ಹೂವು, ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ, ಕಟ್ಟಡ ನಿರ್ಮಾಣ ಕಾರ್ಮಿಕರಿಗೆ, ಬೀದಿಬದಿ ವ್ಯಾಪಾರಿಗಳು ಮೊದಲಾದವರಿಗೆ ಡಿ.ಬಿ.ಟಿ. ಮೂಲಕ ಆರ್ಥಿಕ ನೆರವನ್ನು ನೇರವಾಗಿ ಅವರ ಖಾತೆಗೆ ವರ್ಗಾಯಿಸಲಾಗಿದೆ. ಉಳಿದ ವರ್ಗಗಳಿಗೂ ಶೀಘ್ರವೇ ನೆರವು ನೀಡಲು ಕ್ರಮ ವಹಿಸಲಾಗುತ್ತಿದೆ ಎಂದರು.

ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಿ, ಕಲಾವಿದರ ದಾಖಲೆಗಳನ್ನು ಪರಿಶೀಲಿಸಿ, ಅತ್ಯಂತ ಪಾರದರ್ಶಕವಾಗಿ ನೆರವು ನೀಡಲು ಮಂಜೂರಾತಿ ನೀಡಲಾಗಿದೆ. ಫಲಾನುಭವಿಗಳು ಡಿಬಿಟಿ ಆ್ಯಪ್ ಮುಖಾಂತರ ತಮ್ಮ ಆಧಾರ್ ಸಂಯೋಜಿತ ಬ್ಯಾಂಕ್ ಖಾತೆಗೆ ನೆರವು ವರ್ಗಾವಣೆ ಆಗಿರುವುದನ್ನು ಖಾತರಿ ಪಡಿಸಿಕೊಳ್ಳಬಹುದು ಎಂದು ಯಡಿಯೂರಪ್ಪ ತಿಳಿಸಿದರು.

ಇದೀಗ ವಿವಿಧ ಜಿಲ್ಲೆಗಳಲ್ಲಿ ನಿರ್ಬಂದಗಳನ್ನು ತೆರವುಗೊಳಿಸಲಾಗಿದೆ. ಆದರೆ ಕಲಾವಿದರು ಮುನ್ನೆಚ್ಚರಿಕೆಯ ಕ್ರಮಗಳನ್ನು ತಪ್ಪದೆ ಪಾಲಿಸಬೇಕು. ಜೊತೆಗೆ ಲಸಿಕೆಯನ್ನು ಸಹ ಸರ್ಕಾರ ಉಚಿತವಾಗಿ ನೀಡುತ್ತಿದ್ದು, ತಪ್ಪದೆ ಹಾಕಿಸಿಕೊಳ್ಳುವ ಮೂಲಕ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಸಚಿವ ಅರವಿಂದ ಲಿಂಬಾವಳಿ, ಮೊದಲ ಅಲೆಯ ಸಂದರ್ಭದಲ್ಲಿಯೂ 17 ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ನೆರವು ನೀಡಲಾಗಿತ್ತು. ಈಗ ಮತ್ತೆ ಕಲಾವಿದರಿಗೆ ತಲಾ 3 ಸಾವಿರ ರೂ. ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಜೆ.ರವಿಶಂಕರ್, ನಿರ್ದೇಶಕ ಎಸ್. ರಂಗಪ್ಪ, ಮೊದಲಾದವರು ಸಮಾರಂಭದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಮಹಿಳೆಗೆ ಕಚ್ಚಿದ ನಾಯಿ, ಪ್ರಶ್ನೆ ಮಾಡಿದ ಸಂತ್ರಸ್ಥೆಗೆ ಮಾಲಕಿ ಕಪಾಳಮೋಕ್ಷ, Video Viral

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

SCROLL FOR NEXT