ರಾಜ್ಯ

ರಾಜ್ಯದ ಇತರ 6 ಜಿಲ್ಲೆಗಳಲ್ಲಿ ಅನ್'ಲಾಕ್: ಹೊಸ ಆದೇಶ!

Manjula VN

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ 17 ಜಿಲ್ಲೆಗಳಲ್ಲಿ ಲಾಕ್ಡೌನ್ ನಿಯಮ ಇನ್ನಷ್ಟು ಸಡಿಲಿಕೆ ಮಾಡಿದ್ದ ರಾಜ್ಯ ಸರ್ಕಾರ ಸೋಮವಾರ ಏಕಾಏಕಿ ಮತ್ತೆ 6 ಜಿಲ್ಲೆಗಳನ್ನು ಅನ್'ಲಾಕ್ 2.0 ಪಟ್ಟಿಗೆ ಸೇರ್ಪಡೆಗೊಳಿಸಿ ಆದೇಶಿಸಿದೆ. 

ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲೂ ಲಾಕ್ಡೌನ್ ನಿಂದ ವಿನಾಯಿತಿ ನೀಡಲಾಗಿದೆ. 

ಜೂನ್ 20ರ ಬಳಿಕ ಪಾಸಿಟಿವಿಟಿ ಪ್ರಮಾಣವನ್ನು ಪರಿಗಣಿಸಿರುವ ರಾಜ್ಯ ಕಾರ್ಯಕಾರಿ ಸಮಿತಿಯು ಈ ನಿರ್ಣಯವನ್ನು ಕೈಗೊಂಡಿದೆ. 

ಸಕ್ರಿಯ ಪ್ರಕರಣಗಳ ಪ್ರಮಾಣ ಸತತವಾಗಿ ಕುಸಿತ ಕಂಡು ಬಂದ ಹಿನ್ನೆಲೆಯಲ್ಲಿ 6 ಜಿಲ್ಲೆಗಳನ್ನು ಅನ್'ಲಾಕ್ 2.0 ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಅವರು ಹೇಳಿದ್ದಾರೆ.

ಇತ್ತೀಚೆಗಷ್ಟೇ ಸಿಎಂ ಯಡಿಯೂರಪ್ಪ, ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಜಿಲ್ಲೆ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅನ್ ಲಾಕ್ ತೆರವುಗೊಳಿಸಿದ್ದರು.

SCROLL FOR NEXT