ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ಇಳಿಮುಖ: ತೆಲಂಗಾಣ, ಆಂಧ್ರಪ್ರದೇಶಕ್ಕೆ ಕೆಎಸ್ಆರ್'ಟಿಸಿಯಿಂದ ಬಸ್ ಸೇವೆ ಆರಂಭ

ಕರ್ನಾಟಕದ ಕೆಲವೊಂದು ಜಿಲ್ಲೆಗಳು ಈಗಾಗಲೇ ಅನ್​ಲಾಕ್​ ಆಗಿದ್ದು, ಜನಜೀವನ ಈ ಹಿಂದಿನಂತೆ ಪುನಾರಂಭಗೊಳ್ಳುತ್ತಿದೆ. ಇದರ ಮಧ್ಯೆಯೇ ಕರ್ನಾಟಕ ಸರ್ಕಾರ ಅಂತಾರಾಜ್ಯ ಸಾರಿಗೆ ಮತ್ತೆ ಪುನಾರಂಭ ಮಾಡಲು ಮುಂದಾಗಿದ್ದು, ಅದರ ಪ್ರಥಮ ಹೆಜ್ಜೆಯಾಗಿ ಪಕ್ಕದ ರಾಜ್ಯಗಳಾದ ತೆಲಂಗಾಣ, ಆಂಧ್ರಪ್ರದೇಶಕ್ಕೆ ಬಸ್​ ಸೇವೆ ಮರು ಆರಂಭ ಮಾಡಿದೆ.

ಬೆಂಗಳೂರು: ಕರ್ನಾಟಕದ ಕೆಲವೊಂದು ಜಿಲ್ಲೆಗಳು ಈಗಾಗಲೇ ಅನ್​ಲಾಕ್​ ಆಗಿದ್ದು, ಜನಜೀವನ ಈ ಹಿಂದಿನಂತೆ ಪುನಾರಂಭಗೊಳ್ಳುತ್ತಿದೆ. ಇದರ ಮಧ್ಯೆಯೇ ಕರ್ನಾಟಕ ಸರ್ಕಾರ ಅಂತಾರಾಜ್ಯ ಸಾರಿಗೆ ಮತ್ತೆ ಪುನಾರಂಭ ಮಾಡಲು ಮುಂದಾಗಿದ್ದು, ಅದರ ಪ್ರಥಮ ಹೆಜ್ಜೆಯಾಗಿ ಪಕ್ಕದ ರಾಜ್ಯಗಳಾದ ತೆಲಂಗಾಣ, ಆಂಧ್ರಪ್ರದೇಶಕ್ಕೆ ಬಸ್​ ಸೇವೆ ಮರು ಆರಂಭ ಮಾಡಿದೆ. 

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆ ಈ ಮಹತ್ವದ ನಿರ್ಧಾರ ಹೊರಡಿಸಿದ್ದು, ಆಂಧ್ರಪ್ರದೇಶ ಹಾಗೂ ತೆಲಂಗಾಣಕ್ಕೆ ಕೋವಿಡ್ ಮಾರ್ಗಸೂಚಿ ನಿಯಮದೊಂದಿಗೆ ಬಸ್​ ಸೇವೆ ನಾಳೆಯಿಂದ ಆರಂಭಗೊಳ್ಳಿಸುತ್ತಿದೆ. ಬಸ್​ನಲ್ಲಿ ಶೇ 50ರಷ್ಟು ಆಸನ ಭರ್ತಿಗೆ ಸೂಚನೆ ನೀಡಲಾಗಿದೆ. ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ಮಾತ್ರ ಸೇವೆ ಲಭ್ಯವಿರಲಿದೆ. ಬಸ್​ನಲ್ಲಿ ಪ್ರಯಾಣ ಮಾಡುವವರು ಕೋವಿಡ್​ ನಿಯಮ ಪಾಲನೆ ಮಾಡುವುದು ಕಡ್ಡಾಯವಾಗಿದೆ.

ತೆಲಂಗಾಣದಲ್ಲಿ ಈಗಾಗಲೇ ಕೋವಿಡ್ ಲಾಕ್​ಡೌನ್ ಸಂಪೂರ್ಣವಾಗಿ ತೆರವು ಮಾಡಲಾಗಿದ್ದು, ಎಲ್ಲಾ ಸೇವೆಗಳು ಆರಂಭಗೊಂಡಿವೆ. ಜತೆಗೆ ಅಂತಾರಾಜ್ಯ ಬಸ್​ ಸೇವೆಗೂ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಇಂದಿನಿಂದ ಸಂಚಾರ ಸೇವೆ ಪುನಾರಂಭವಾಗಿದೆ. 

ತೆಲಂಗಾಣದಿಂದ ಆಂಧ್ರಕ್ಕೆ ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಬಸ್ ಸೇವೆ ಇರಲಿದೆ. ಇತ್ತ ಕರ್ನಾಟಕಕ್ಕೂ ಬಸ್​​ ಸೇವೆ ಆರಂಭಗೊಂಡಿದ್ದು, ಕರ್ನಾಟಕ ಕೋವಿಡ್ ನಿಯಮದ ಅನುಸಾರವಾಗಿ ಬೆಂಗಳೂರು ನಗರ ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಇಂದಿನಿಂದಲೇ ಟಿಎಸ್​ಆರ್​ಟಿಸಿ ಬಸ್ ಸಂಚಾರ ಪುನಾರಂಭವಾಗಿದೆ. ಬೆಳಗ್ಗೆ 5 ಗಂಟೆಯಿಂದ ಸಂಜೆ 7ರ ವರೆಗೆ ಬಸ್​ಗಳು ಸಂಚರಿಸಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT