ಸಚಿವ ಸುರೇಶ್ ಕುಮಾರ್ 
ರಾಜ್ಯ

ಇಂಟರ್ನೆಟ್ ಸಮಸ್ಯೆ ಬಗೆಹರಿಸಿ: ಮುಖ್ಯಮಂತ್ರಿಗಳಿಗೆ ಸುರೇಶ್ ಕುಮಾರ್ ಮನವಿ

ರಾಜ್ಯದ ವಿವಿಧ ಭಾಗಗಳಲ್ಲಿ ಅಂತರ್ಜಾಲ ನೆಟ್​ವರ್ಕ್ ಸಮಸ್ಯೆಯಿಂದಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿ ಸಮೂಹ ತೊಂದರೆಗೊಳಗಾಗಿದ್ದು, ಅಂತರ್ಜಾಲ ಮತ್ತು ನೆಟ್​ವರ್ಕ್ ಸಮಸ್ಯೆಗೆ ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಬೆಂಗಳೂರು: ಕೋವಿಡ್ ಕಾಲಘಟ್ಟದಲ್ಲಿ ಶಾಲಾ ಕಾಲೇಜು ತರಗತಿಗಳು ಆನ್‍ಲೈನ್ ಮೂಲಕ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಅಂತರ್ಜಾಲ ನೆಟ್​ವರ್ಕ್ ಸಮಸ್ಯೆಯಿಂದಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿ ಸಮೂಹ ತೊಂದರೆಗೊಳಗಾಗಿದ್ದು, ಅಂತರ್ಜಾಲ ಮತ್ತು ನೆಟ್​ವರ್ಕ್ ಸಮಸ್ಯೆಗೆ ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ಗ್ರಾಮೀಣ ಪ್ರದೇಶದಲ್ಲಿ ನೆಟ್​ವರ್ಕ್ ದೊರೆಯದೇ ಗ್ರಾಮೀಣ ಪ್ರದೇಶದ ಮಕ್ಕಳು ಬೆಟ್ಟ ಗುಡ್ಡಗಳನ್ನು ಹತ್ತಿ ಕುಳಿತು ಆನ್​ಲೈನ್ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಮಳೆಗಾಲವಾದ್ದರಿಂದ ಬೆಟ್ಟದ ಮೇಲೆ ಕುಳಿತು ಪಾಠದಲ್ಲಿ ತೊಡಗಿಸಿಕೊಂಡ ಮಕ್ಕಳನ್ನು ಮಳೆಯಿಂದ ರಕ್ಷಿಸಲು ಪೋಷಕರು ಛತ್ರಿ ಹಿಡಿದು ಮಳೆಯಲ್ಲಿ ನಿಂತುಕೊಂಡ ಫೋಟೋಗಳು ಪತ್ರಿಕೆಗಳಲ್ಲಿ ಮತ್ತು ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ನೆಟ್​ವರ್ಕ್ ಸಮಸ್ಯೆಗೆ ಕೊನೆ ಹಾಡಲು ನೆಟ್​ವರ್ಕ್ ಆಪರೇಟರ್‌ ಗಳ ಸಭೆ ನಡೆಸಿ ಪರಿಹಾರ ರೂಪಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. 

ಇಂದಿನ ಸಂದರ್ಭವನ್ನು ಗಮನಿಸಿದರೆ ಕೊವಿಡ್ ಕಾಲಘಟ್ಟದಲ್ಲಿ ಆನ್​ಲೈನ್ ತರಗತಿಗಳೇ ಸಾಮಾನ್ಯವಾಗಬಹುದಾಗಿದೆ. ಕೊವಿಡ್ ಪೂರ್ವದ ಸಹಜ ಸಾಮಾಜಿಕ ಸ್ಥಿತಿಗತಿಗಳು ಸದ್ಯಕ್ಕೆ ಹಿಂದಿರುಗಲು ಸಾಧ್ಯವಿಲ್ಲವೆಂಬುದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ. ಈ ಹೊಸ ಸ್ಥಿತಿಗೆ ಹೊಂದಿಕೊಳ್ಳದೇ ಅನ್ಯದಾರಿಯಿಲ್ಲವಾದ್ದರಿಂದ ನಾವು ಅಂತರ್ಜಾಲ ನೆಟ್​ವರ್ಕ್ ಸಮಸ್ಯೆಯನ್ನು ಪರಿರಿಸಿಕೊಳ್ಳಲೇಬೇಕಿದೆ ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT