ರೋಹಿಣಿ ಸಿಂಧೂರಿ 
ರಾಜ್ಯ

ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ: ಅನುಮತಿ ಇಲ್ಲದೇ ಈಜುಕೊಳ ನಿರ್ಮಾಣ; ತನಿಖಾ ವರದಿ

ಮೈಸೂರು ಜಿಲ್ಲಾಧಿಕಾರಿ ಆಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಈಜುಕೊಳ ನಿರ್ಮಿಸಿಕೊಂಡಿದ್ದ ವಿಚಾರ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ ತಂದೊಡ್ಡಿದೆ.

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಆಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಈಜುಕೊಳ ನಿರ್ಮಿಸಿಕೊಂಡಿದ್ದ ವಿಚಾರ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ ತಂದೊಡ್ಡಿದೆ.

ಜಿಲ್ಲಾಧಿಕಾರಿ ನಿವಾಸ ‘ಜಲಸನ್ನಿಧಿ’ಯಲ್ಲಿ ಈಜುಕೊಳ ನಿರ್ಮಾಣ ಮಾಡಲು ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮತಿಯನ್ನೇ ಪಡೆದಿಲ್ಲ ಎಂದು ಪ್ರಾದೇಶಿಕ ಆಯುಕ್ತರ ತನಿಖಾ ವರದಿ ಹೇಳಿದೆ. 

ಸ್ವಿಮ್ಮಿಂಗ್​ ಪೂಲ್​ ನಿರ್ಮಾಣ ಸಂಬಂಧ ಪ್ರಾದೇಶಿಕ ಆಯುಕ್ತರು ರಾಜ್ಯ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ್ದಾರೆ. ಈಜುಕೊಳ ನಿರ್ಮಾಣಕ್ಕೆ 32 ಲಕ್ಷ ರೂಪಾಯಿ ವೆಚ್ಚವಾಗಿದೆ. ಇದಕ್ಕೆ ತಾಂತ್ರಿಕ ವರ್ಗದಿಂದ ,ಲೋಕೋಪಯೋಗಿ ಇಲಾಖೆಯಿಂದ ಅನುಮತಿಯನ್ನೇ ಪಡೆದಿಲ್ಲ. ಆಡಳಿತಾತ್ಮಕ ಮಂಜೂರಾತಿಯನ್ನು ಪಡೆದಿಲ್ಲ ಎಂದು ವರದಿ ನೀಡಿರುವುದು ರೋಹಿಣಿ ಸಿಂಧೂರಿಗೆ ತೀವ್ರ ಹಿನ್ನಡೆಯಾಗಿದೆ.

ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್‌ ಅವರು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸಲ್ಲಿಸಿರುವ ವರದಿಯು ಮಾಧ್ಯಮಗಳಿಗೆ ಸೋರಿಕೆಯಾಗಿದ್ದು, ಪ್ರಮುಖವಾಗಿ 6 ನ್ಯೂನತೆಗಳು ತನಿಖೆ ವೇಳೆ ಕಂಡುಬಂದಿರುವುದಾಗಿ ತಿಳಿಸಿದೆ.

ನಗರಾಭಿವೃದ್ಧಿ ಇಲಾಖೆಯು 2020ರ ಏ. 21ರಂದು ಹೊರಡಿಸಿದ ಅಧಿಸೂಚನೆಯಂತೆ ಪಾರಂಪರಿಕ ಕಟ್ಟಡ ಗಳ ಸಂರಕ್ಷಣೆ, ನವೀಕರಣ ಕೆಲಸ ಮಾಡಬೇಕಾದರೆ ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮೋದನೆ ಪಡೆಯಬೇಕು. ಆದರೆ, ಈಜುಕೊಳ ನಿರ್ಮಾಣಕ್ಕೆ ಅನುಮೋದನೆ ಪಡೆದಿಲ್ಲ ಎಂದಿದೆ.

ಮನೆಯಲ್ಲಿ ಈಜುಕೊಳ ನಿರ್ಮಿಸಿಕೊಂಡಿರುವುದರಿಂದ ಯಾವುದೇ ಸಾರ್ವಜನಿಕರಿಗೆ ಉಪಯೋಗಿಸಲು ಸಾಧ್ಯವಿರುವುದಿಲ್ಲ. ಈಜುಕೊಳ ನಿರ್ಮಾಣ ಸಾರ್ವಜನಿಕ ಹಿತಾಸಕ್ತಿ ಹೊಂದಿರುವುದಿಲ್ಲ. ಹೀಗಾಗಿ ಈಜುಕೊಳ ನಿರ್ಮಾಣವೇ ಅಕ್ರಮ, ಕಾನೂನಿಗೆ ವಿರುದ್ದವಾಗಿ ನಿರ್ಮಿಸಲಾಗಿದೆ. ರೋಹಿಣಿ ಸಿಂಧೂರಿ ಅಧಿಕಾರ ದುರ್ಬಳಕೆ ಮಾಡಿಕೊಂಡು ನಿರ್ಮಿಸಿರುವುದಾಗಿ ಪ್ರಾದೇಶಿಕ ಆಯುಕ್ತರು ವರದಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT