ಸಂಗ್ರಹ ಚಿತ್ರ 
ರಾಜ್ಯ

ಮೈಸೂರು ಬಳಿಕ ಬೆಂಗಳೂರಲ್ಲೂ ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ವೈರಸ್ ಪತ್ತೆ: ಹೆಚ್ಚಿದ ಆತಂಕ

3ನೇ ಅಲೆಗೆ ಕಾರಣವಾಗಬಹುದು ಎಂಬ ಆತಂಕ ಹುಟ್ಟುಹಾಕಿರುವ ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ತಳಿಯ ವೈರಸ್ ಇದೀಗ ಬೆಂಗಳೂರಿನಲ್ಲಿಯೂ ಕಾಣಿಸಿಕೊಂಡಿದೆ.

ಬೆಂಗಳೂರು: 3ನೇ ಅಲೆಗೆ ಕಾರಣವಾಗಬಹುದು ಎಂಬ ಆತಂಕ ಹುಟ್ಟುಹಾಕಿರುವ ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ತಳಿಯ ವೈರಸ್ ಇದೀಗ ಬೆಂಗಳೂರಿನಲ್ಲಿಯೂ ಕಾಣಿಸಿಕೊಂಡಿದೆ. 

ಡೆಲ್ಟಾ ಪ್ಲಸ್ ವೈರಸ್ ಮೊದಲ ಪ್ರಕರಣ ಮೈಸೂರಿನಲ್ಲಿ ಪತ್ತೆಯಾಗಿತ್ತು. ಇದೀಗ ಬೆಂಗಳೂರಿನಲ್ಲಿಯೂ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಅವರು ದೃಢಪಡಿಸಿದ್ದಾರೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸುಧಾಕರ್ ಅವರು, ಮಂಗಳವಾರ ಮೈಸೂರಿನಲ್ಲಿ ಒಂದು ಪ್ರಕರಣ ಪತ್ತೆಯಾಗಿತ್ತು. ಬುಧವಾರ ಬೆಂಗಳೂರಿನಲ್ಲಿ ಮತ್ತೊಂದು ಪ್ರಕರಣ ಕಂಡುಬಂದಿದೆ. ಬೆಂಗಳೂರಿನಲ್ಲಿ ರೋಗಿಯನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದರೊಂದಿಗೆ ಕರ್ನಾಟಕದಲ್ಲಿ ಒಟ್ಟು ಎರಡು ಪ್ರಕರಣಗಳು ಪತ್ತೆಯಾದಂತಾಗಿದೆ ಎಂದು ತಿಳಿಸಿದ್ದಾರೆ.

ಅಲ್ಲದೇ ತಮಿಳುನಾಡಿನಿಂದ ಇಲ್ಲಿನ ರಾಷ್ಟ್ರೀಯ ಜೈವಿಕ ವಿಜ್ಞಾನ ಕೇಂದ್ರಕ್ಕೆ ಕಳುಹಿಸಿದ ಒಂದು ಮಾದರಿಯಲ್ಲಿಯೂ ಡೆಲ್ಟಾ ಪ್ಲಸ್ ರೂಪಾಂತರ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಕೊರೋನಾ ಸೋಂಕಿಗೊಳಗಾಗಿದ್ದ 86 ವರ್ಷದ ವ್ಯಕ್ತಿಯಲ್ಲಿ ರೂಪಾಂತರಿ ವೈರಸ್ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ವ್ಯಕ್ತಿಯ ಮಾಹತಿಯನ್ನು ನಿಮ್ಹಾನ್ಸ್'ಗೆ ಪರೀಕ್ಷೆಗೆ ಕಳುಹಿಸಲಾಗಿದ್ದು, ಬಳಿಕ ವ್ಯಕ್ತಿಯಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCC ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

SCROLL FOR NEXT