ರಾಜ್ಯ

ಈಜುಕೊಳ ಕಟ್ಟಿಸಿದ್ದು ರೋಹಿಣಿ ಸಿಂಧೂರಿಯವರ ನೈತಿಕ ಅಧಃಪತನ ತೋರುತ್ತದೆ: ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್

Sumana Upadhyaya

ಬೆಂಗಳೂರು: ಮೈಸೂರಿನ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರು ಜಿಲ್ಲಾಧಿಕಾರಿ ನಿವಾಸದ ಆವರಣದಲ್ಲಿ ನಿರ್ಮಿಸಿದ್ದ ಈಜುಕೊಳ ಭಾರೀ ವಿವಾದ ಸೃಷ್ಟಿಸಿತ್ತು. ನಿಯಮ ಉಲ್ಲಂಘನೆ ಮಾಡಿ ಅನುಮತಿ ಪಡೆಯದೇ ರೋಹಿಣಿ ಸಿಂಧೂರಿಯವರು ಸ್ವಹಿತಾಸಕ್ತಿಯಿಂದ ಈಜುಕೊಳ ನಿರ್ಮಿಸಿಕೊಂಡಿದ್ದರು ಎಂದು ಮೈಸೂರು ಪ್ರಾದೇಶಿಕ ಆಯುಕ್ತ ಜಿಸಿ ಪ್ರಕಾಶ್ ಸಲ್ಲಿಸಿದ್ದ ವರದಿಯಲ್ಲಿ ಹೇಳಲಾಗಿದೆ.

ಇದೀಗ ಅವರು ಅಲ್ಲಿ ಜಿಲ್ಲಾಧಿಕಾರಿಯಾಗಿಲ್ಲ. ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾಗಿ ವರ್ಗಾವಣೆಗೊಂಡಿದ್ದಾರೆ. ಆದರೆ ಈಜುಕೊಳದ ಬಗ್ಗೆ ಮಾತನಾಡುವುದು ಮಾತ್ರ ನಿಂತಿಲ್ಲ.

ಕರ್ನಾಟಕದ ಐಜಿಪಿ, ಮಹಿಳಾ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ರೋಹಿಣಿ ಸಿಂಧೂರಿ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅವರು, ಜಿಲ್ಲೆಯಲ್ಲಿ ಕೊರೋನಾದಿಂದ ಜನರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ರೋಹಿಣಿ ಸಿಂಧೂರಿಯವರಿಗೆ ಈಜುಕೊಳ ನಿರ್ಮಿಸುವ ಅಗತ್ಯವಿರಲಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೋರೋನ ಹಾಗು ಆರ್ಥಿಕ ವ್ಯವಸ್ಥೆಯಿಂದ ಜನರು ಸಂತ್ರಸ್ತರಾಗಿರುವ ಜನರ ಹಣವನ್ನು ಬಳಸಿಕೊಂಡು ಬಂಗಲೆಯಲ್ಲಿ ಸ್ವಿಮ್ಮಂಗ್ ಪೂಲ್ ಕಟ್ಟಲು ಮುಂದಾಗಿದ್ದು ರೋಹಿಣಿ ಸಿಂಧೂರಿಯವರ ನೈತಿಕ ಅಧಃಪತನವನ್ನು ತೋರಿಸುತ್ತದೆ, ಅವರು ಪರವಾನಗಿ ಪಡೆದುಕೊಂಡಿದ್ದರೋ ಇಲ್ಲವೋ ಎಂಬುದು ಆಮೇಲಿನ ವಿಚಾರ ಎಂದು ಖಾರವಾಗಿ ಅಧಿಕಾರಿ ರೂಪಾ ಮೌದ್ಗಿಲ್ ಬರೆದುಕೊಂಡಿದ್ದಾರೆ.

SCROLL FOR NEXT