ಸಾಂದರ್ಭಿಕ ಚಿತ್ರ 
ರಾಜ್ಯ

ತುಮಕೂರು: ಬಾವಿಗೆ ಬಿದ್ದು ತಾಯಿ, ಇಬ್ಬರು ಮಕ್ಕಳ ಸಾವು

ಆಕಸ್ಮಿಕವಾಗಿ ಬಾವಿಗೆ ಬಿದ್ದು ತಾಯಿ, ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಕೋರ ಹೋಬಳಿಯ ಚಿಕ್ಕತೊಟ್ಲುಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿರುಮಲಪಾಳ್ಯದಲ್ಲಿ ಗುರುವಾರ ಜರುಗಿದೆ.

ತುಮಕೂರು: ಆಕಸ್ಮಿಕವಾಗಿ ಬಾವಿಗೆ ಬಿದ್ದು ತಾಯಿ, ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಕೋರ ಹೋಬಳಿಯ ಚಿಕ್ಕತೊಟ್ಲುಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿರುಮಲಪಾಳ್ಯದಲ್ಲಿ ಗುರುವಾರ ಜರುಗಿದೆ.

ಮೃತರನ್ನು ತಿರುಮಲಪಾಳ್ಯದ ಕುಮಾರ್ ಅವರ ಪತ್ನಿ ಹೇಮಲತಾ (34) ಹಾಗೂ ಮಕ್ಕಳಾದ ಮಾನಸ (6), ಪೂರ್ವಿಕಾ (3) ಎಂದು ಗುರುತಿಸಲಾಗಿದೆ.

ಗುರುವಾರ ಕಾರ ಹುಣ್ಣಿಮೆ ನಿಮಿತ್ಯ ತೋಟದಲ್ಲಿ ಮೊಸರನ್ನ ಎಡೆ ಹಾಕಲು ಹೋಗಿದ್ದರು. ಆ ಸಂದರ್ಭದಲ್ಲಿ ಮಾನಸ ಬಾವಿಯ ದಡದಲ್ಲಿದ್ದ ಸೀಬೆ ಹಣ್ಣಿನ ಮರದಲ್ಲಿ ಹಣ್ಣು ಕೀಳಲು ಹೋಗಿ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಾಳೆ. 

ಈ ವೇಳೆ ಜೊತೆಯಲ್ಲಿದ್ದ ಪೂರ್ವಿಕಾಳು ಅಕ್ಕನಂತೆ ಬಾವಿಗೆ ಬಿದ್ದಿದ್ದಾಳೆ. ತನ್ನಿಬ್ಬರು ಮಕ್ಕಳು ಬಾವಿಗೆ ಬಿದ್ದಿದ್ದನ್ನು ಕಂಡು ಗಾಬರಿಗೊಂಡ ತಾಯಿ ಹೇಮಲತಾ ಮಕ್ಕಳನ್ನು ರಕ್ಷಿಸಲು ಬಾವಿಗೆ ಹಾರಿದ್ದಾರೆ. ಆದರೆ, ದುರದೃಷ್ಟಾವಶಾತ್ ಮೂವರು ಬಾವಿಯಿಂದ ಮೇಲೆ ಬರಲು ಸಾಧ್ಯವಾಗದೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!