ರಾಜ್ಯ

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ: ಬೆಂಗಳೂರಿನಲ್ಲಿ 614 ಸೇರಿ 3,310 ಪ್ರಕರಣ ಪತ್ತೆ, 114 ಮಂದಿ ಸಾವು!

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಇಂದು 3,310 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,26,754ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 114 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 34,539ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.  

ಬೆಂಗಳೂರಿನಲ್ಲಿ ಇಂದು 614 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,09,687ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 17 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 6,524 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 26,84,997ಕ್ಕೆ ಏರಿಕೆಯಾಗಿದೆ. ಇನ್ನು 1,07,195 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,58,072 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 3,310 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 2.09ಕ್ಕೆ ಇಳಿದಿದೆ.

SCROLL FOR NEXT