ರಾಜ್ಯ

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಪರಸ್ಪರ ನೀರು ಹಂಚಿಕೆ ಸಂಬಂಧ ಮಹತ್ವದ ಪ್ರಗತಿ: ಕಾರಜೋಳ

Shilpa D

ಬೆಳಗಾವಿ: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ನೀರು ಹಂಚಿಕೆ ಸಂಬಂದ ಮಹತ್ವದ ಪ್ರಗತಿಯಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ-ಮಹಾರಾಷ್ಟ್ರ ಪ್ರತಿವರ್ಷ ನಾಲ್ಕು ಟಿಎಂಸಿ ನೀರನ್ನು ವಿನಿಮಯ ಮಾಡಿಕೊಳ್ಳುವ ಬಗ್ಗೆ ಒಪ್ಪಂದ ಮಾಡಿಕೊಳ್ಳಲು ಸರ್ಕಾರಗಳು ತಾತ್ವಿಕವಾಗಿ ಅನುಮೋದನೆ ನೀಡಿವೆ ಎಂದು ಹೇಳಿದರು.

ಹಲವು ಸುತ್ತಿನ ಚರ್ಚೆಗಳ ನಂತರ ಮಹಾರಾಷ್ಟ್ರದ ಕೊಯ್ನಾ ಅಣೆಕಟ್ಟಿನಿಂದ ಬೇಸಿಗೆಯಲ್ಲಿ ಕರ್ನಾಟಕಕ್ಕೆ ನಾಲ್ಕು ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗುವುದು ಮತ್ತು ಅದೇ ಪ್ರಮಾಣದ ನೀರನ್ನು ಕರ್ನಾಟಕವು ಮಹಾರಾಷ್ಟ್ರದ ಜಾಟ್ ತಾಲ್ಲೂಕಿಗೆ ಬಿಡುಗಡೆ ಮಾಡಲು ಪರಸ್ಪರ ಒಪ್ಪಿಗೆ ನೀಡಲಾಗಿದೆ ಎಂದು ಕಾರಜೋಳ ತಿಳಿಸಿದ್ದಾರೆ.

SCROLL FOR NEXT