ಆರೋಗ್ಯ ಸಚಿವ ಡಾ.ಕೆ. ಸುಧಾಕರ್ 
ರಾಜ್ಯ

ಡೆಲ್ಟಾ ಪ್ಲಸ್ ವೈರಾಣು ಬಗ್ಗೆ ಆತಂಕಪಡಬೇಕಿಲ್ಲ; ಆರು ಕಡೆ ಲ್ಯಾಬ್: ಡಾ. ಕೆ. ಸುಧಾಕರ್

ಕೋವಿಡ್ ಡೆಲ್ಟಾ ಪ್ಲಸ್ ವೈರಾಣುವಿನ ಬಗ್ಗೆ ಹೆಚ್ಚೇನೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಬೆಂಗಳೂರು: ಕೋವಿಡ್ ಡೆಲ್ಟಾ ಪ್ಲಸ್ ವೈರಾಣುವಿನ ಬಗ್ಗೆ ಹೆಚ್ಚೇನೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋವಿಡ್ ಡೆಲ್ಟಾ ಪ್ಲಸ್ ವೈರಾಣುವಿನ ಒಂದು ಪ್ರಕರಣ ಬೆಂಗಳೂರಿನಲ್ಲಿ ಮತ್ತು ಇನ್ನೊಂದು ಪ್ರಕರಣ ಮೈಸೂರಿನಲ್ಲಿ ಕಂಡುಬಂದಿದೆ. ಇಬ್ಬರೂ ಸೌಮ್ಯ ಲಕ್ಷಣಗಳನ್ನು ಹೊಂದಿದ ರೋಗಿಗಳಾಗಿದ್ದಾರೆ. ಮೈಸೂರಿನ ರೋಗಿ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ತಿಳಿಸಿದರು.

ಈ ಹೊಸ ವೈರಾಣುವಿನಿಂದ ಸೋಂಕಿತರಿಗೆ ಹೆಚ್ಚು ಸಮಸ್ಯೆಯೇನೂ ಆಗಿಲ್ಲ. ಇವರ ಸಂಪರ್ಕಿತರಿಗೂ ಪರೀಕ್ಷೆ ನಡೆಸಿದಾಗ ನೆಗೆಟಿವ್ ವರದಿ ಬಂದಿದೆ. ಆದ್ದರಿಂದ ಈ ವೈರಾಣು ಬಗ್ಗೆ ವಿಶೇಷವಾಗಿ ಆತಂಕಪಡುವ ಅಗತ್ಯವಿಲ್ಲ. ಪ್ರತಿ ದಿನ ಜೀನೋಮ್ ಸೀಕ್ವೆನ್ಸಿಂಗ್ ಆಗುತ್ತಿರುತ್ತದೆ. ಈ ವೇಳೆ ವೈರಾಣು ಪತ್ತೆಯಾಗುತ್ತದೆ ಎಂದರು.

ಕೇರಳದಲ್ಲಿ ಸೋಂಕು ಹೆಚ್ಚಿದ್ದು, ಪಾಸಿಟಿವಿಟಿ ದರ ಶೇಕಡಾ 10ಕ್ಕಿಂತ ಅಧಿಕವಾಗಿದೆ. ನಮ್ಮ ರಾಜ್ಯ ಕೇರಳ ಗಡಿ ಹಂಚಿ ಕೊಳ್ಳುವುದರಿಂದ ಬಹಳ ಎಚ್ಚರಿಕೆಯಿಂದ ಇರಬೇಕು. ಅದೇ ರೀತಿ ಮಹಾರಾಷ್ಟ್ರ ಕೂಡ ಗಡಿ ಹಂಚಿಕೊಂಡಿದೆ. ಗಡಿ ಜಿಲ್ಲೆಗಳಲ್ಲಿ ಹೆಚ್ಚು ಪರೀಕ್ಷೆ ಮಾಡಬೇಕು, ಮುಂಜಾಗ್ರತಾ ಕ್ರಮ ವಹಿಸಬೇಕು, ಅಲ್ಲಿಂದ ಒಳಬರುವ ಪ್ರಯಾಣಿಕರಿಗೆ ರಾಂಡಮ್ ಪರೀಕ್ಷೆ ಮಾಡಬೇಕು ಎಂದು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದರು.

ಗಡಿಭಾಗಗಳನ್ನು ಮುಚ್ಚುವುದು ಸಮಂಜಸವಲ್ಲ. ಆದರೆ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಸ್, ರೈಲು ಎಲ್ಲಿಂದ ಬಂದರೂ ಆಯಾ ನಿಲ್ದಾಣಗಳಲ್ಲಿ ಎಚ್ಚರ ವಹಿಸಬೇಕು. ಬೆಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಹುಬ್ಬಳ್ಳಿಯ ನಾಲ್ಕು ವೈದ್ಯಕೀಯ ಕಾಲೇಜುಗಳು ಹಾಗೂ ಮಂಗಳೂರು ಮತ್ತು ವಿಜಯಪುರ ಜಿಲ್ಲಾಸ್ಪತ್ರೆಗಳಲ್ಲಿ ಒಟ್ಟು 6 ಜೀನೋಮ್ ಸೀಕ್ವೆನ್ಸ್ ಲ್ಯಾಬ್ ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಅಧ್ಯಕ್ಷತೆಯ ಸಭೆಯಲ್ಲಿ ಕೋವಿಡ್ ನಿಯಂತ್ರಣ ಕ್ರಮ ಕುರಿತು ಚರ್ಚೆಯಾಗಲಿದೆ. ಡೆಲ್ಟಾ ಮತ್ತು ಡೆಲ್ಟಾ ಪ್ಲಸ್ ಚಿಕಿತ್ಸೆಯಲ್ಲಿ ಕೆಲ ವ್ಯತ್ಯಾಸ ಇದೆ. ಈ ಬಗ್ಗೆ ತಜ್ಞರು ತಿಳಿಸಿದ್ದಾರೆ ಎಂದು ಡಾ. ಕೆ. ಸುಧಾಕರ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ