ಸುರೇಶ್ ಕುಮಾರ್ 
ರಾಜ್ಯ

ಶಾಲೆಗಳ ಆರಂಭ ಕುರಿತು ಸೋಮವಾರ ಅಂತಿಮ ತೀರ್ಮಾನ: ಸಚಿವ ಸುರೇಶ್ ಕುಮಾರ್

ರಾಜ್ಯದಲ್ಲಿ ಶಾಲೆಗಳ ಆರಂಭದ ಬಗ್ಗೆ ಸೋಮವಾರ ತಜ್ಞರ ಸಭೆ ಕರೆಯಲಾಗಿದೆ.ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭ ಕುರಿತಂತೆ ಸೋಮವಾರದಂದು ಅಧಿಕಾರಿಗಳು, ತಜ್ಞರ ಸಭೆಯನ್ನು ಕರೆದಿದ್ದು ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ, ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಆರಂಭದ ಬಗ್ಗೆ ಸೋಮವಾರ ತಜ್ಞರ ಸಭೆ ಕರೆಯಲಾಗಿದೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭ ಕುರಿತಂತೆ ಸೋಮವಾರದಂದು ಅಧಿಕಾರಿಗಳು, ತಜ್ಞರ ಸಭೆಯನ್ನು ಕರೆದಿದ್ದು ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ, ನಿರ್ಧಾರ ಪ್ರಕಟಿಸಲಾಗುತ್ತದೆ ಎಂದರು.

ಸದ್ಯಕ್ಕೆ ವಿದ್ಯಾಗಮದ ಮೂಲಕ ಶಾಲಾ ಶೈಕ್ಷಣಿಕ ಚಟುವಟಿಕೆ ನಡೆಯುತ್ತಿದೆ, ಕಲಿಕಾ ದಿನಚರಿ ಬಗ್ಗೆ ಯೋಜನೆ ಮಾಡಿದ್ದೇವೆ. ಶಾಲಾ ಆರಂಭದ ಬಗ್ಗೆ ತಜ್ಞರು ಅಭಿಪ್ರಾಯ ನೀಡಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಖಾಸಗಿ ಶಾಲಾ ಶುಲ್ಕ ಕುರಿತಂತೆ ಪ್ರತಿಕ್ರಿಯಿಸಿದ ಸುರೇಶ್ ಕುಮಾರ್, ಈ ಸಂಬಂಧ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ನ್ಯಾಯಾಲಯದ ತೀರ್ಪಿನ ಆ ನಂತರ ಚರ್ಚಿಸಿ ಅಂತಿಮ ಕ್ರಮ ಕೈಗೊಳ್ಳವುದಾಗಿ  ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT