ಸುರೇಶ್ ಕುಮಾರ್ 
ರಾಜ್ಯ

ಆರೋಗ್ಯ ಇಲಾಖೆಯ ಸಲಹೆಯಂತೆಯೇ ಪರೀಕ್ಷಾ ದಿನಾಂಕ ಘೋಷಣೆ ಮಾಡಲಾಗಿದೆ: ಎಸ್. ಸುರೇಶ್ ಕುಮಾರ್

ಆರೋಗ್ಯ ಇಲಾಖೆಯ ಸಲಹೆಯಂತೆಯೇ ಪರೀಕ್ಷಾ ದಿನಾಂಕಗಳ ಘೋಷಣೆ ಮಾಡಲಾಗಿದೆ. ಇದಕ್ಕೆ ಮುಖ್ಯಮಂತ್ರಿಗಳ ಅನುಮತಿ ಕೂಡ ಪಡೆಯಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆ ಕುರಿತು ತಮ್ಮೊಂದಿಗೆ ಚರ್ಚಿಸಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಆರೋಗ್ಯ ಇಲಾಖೆಯ ಸಲಹೆಯಂತೆಯೇ ಪರೀಕ್ಷಾ ದಿನಾಂಕಗಳ ಘೋಷಣೆ ಮಾಡಲಾಗಿದೆ. ಇದಕ್ಕೆ ಮುಖ್ಯಮಂತ್ರಿಗಳ ಅನುಮತಿ ಕೂಡ ಪಡೆಯಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳ ಸಮ್ಮುಖದಲ್ಲಿ  ಸಭೆ  ನಡೆಸಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಪ್ರಮಾಣಿತ ಕಾರ್ಯಚರಣಾ ವಿಧಾನಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಅಲ್ಲದೇ  ಜಿಲ್ಲಾಧಿಕಾರಿಗಳ ವಿಡಿಯೋ ಸಂವಾದದಲ್ಲಿ ಕೂಡ  ಆರೋಗ್ಯ ಇಲಾಖೆಯ ಆಯುಕ್ತರು  ಪಾಲ್ಗೊಂಡಿದ್ದು, ಲಾಖೆಯು ನೀಡಿರುವ ಎಸ್.ಓ.ಪಿ ಅನುಸರಣೆಗೆ ಬೇಕಾದ ಸಿದ್ಧತೆಗಳ ಕುರಿತು ತಮ್ಮ ಅಭಿಪ್ರಾಯವನ್ನು ಎಲ್ಲ ಜಿಲ್ಲಾಡಳಿತಗಳೊಂದಿಗೆ ಹಂಚಿಕೊಂಡಿದ್ದಾರೆ.ಹಾಗೆಯೇ ಮುಖ್ಯಮಂತ್ರಿಗಳನ್ನು ಸಭೆಗೆ ಮುನ್ನ ಖುದ್ದಾಗಿ ಭೇಟಿ ಮಾಡಿ ಪರೀಕ್ಷಾ ದಿನಾಂಕ ಪ್ರಕಟಣೆಗೆ ಮೌಖಿಕ ಒಪ್ಪಿಗೆ ಪಡೆಯಲಾಗಿದೆ ಎಂದು ಸುರೇಶ್ ಕುಮಾರ್ ವಿವರಣೆ ನೀಡಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್