ಸಂಗ್ರಹ ಚಿತ್ರ 
ರಾಜ್ಯ

ಕೌಟುಂಬಿಕ ಕಲಹ: ಬಳ್ಳಾರಿಯಲ್ಲಿ ಮಕ್ಕಳಿಬ್ಬರ ಉಸಿರು ನಿಲ್ಲಿಸಿ ತಾಯಿ ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ಮನನೊಂದು ಮಹಿಳೆಯೊಬ್ಬಳು ತನ್ನಿಬ್ಬರು ಮಕ್ಕಳನ್ನು ನೀರಿನ ಟ್ಯಾಂಕ್ ನಲ್ಲಿ ಮುಳುಗಿಸಿ ತಾನೂ ಆತಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿಯ ಇಂದಿರಾ ನಗರದಲ್ಲಿ ವರದಿಯಾಗಿದೆ.

ಬಳ್ಳಾರಿ: ಕೌಟುಂಬಿಕ ಕಲಹದಿಂದ ಮನನೊಂದು ಮಹಿಳೆಯೊಬ್ಬಳು ತನ್ನಿಬ್ಬರು ಮಕ್ಕಳನ್ನು ನೀರಿನ ಟ್ಯಾಂಕ್ ನಲ್ಲಿ ಮುಳುಗಿಸಿ ತಾನೂ ಆತಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿಯ ಇಂದಿರಾ ನಗರದಲ್ಲಿ ವರದಿಯಾಗಿದೆ.

ಮೃತರನ್ನು ಬಳ್ಳಾರಿ ಇಂದಿರಾ ನಗರದ ಏಳನೇ ಅಡ್ಡರಸ್ತೆಯ ನಿವಾಸಿ ಸಿದ್ದಪ್ಪನವರ ಪತ್ನಿ ಸುನೀತಾ (25) ಮತ್ತು ಆಕೆಯ  2 ವರ್ಷದ ಮಗ ಹಾಗೂ 10 ತಿಂಗಳ‌  ಹೆಣ್ಣು ಮಗುವೆಂದು ಗುರುತಿಸಲಾಗಿದೆ.

ಪತಿ ಪತ್ನಿಯರಲ್ಲಿ ಯಾವಾಗಲೂ ಕ್ಷುಲ್ಲಕ ಕಾರಣಗಳಿಗೆ ಜಗಳವಾಗುತ್ತಿತ್ತು. ನಿನ್ನೆ ಸಹ ಸಣ್ಣ ವಿಚಾರಕ್ಕೆ ಮನಸ್ತಾಪವಾಗಿತ್ತು. ಇದರಿಂದ ಬೇಸರಗೊಂಡ ಸುನೀತಾ ಮನೆಯ ಮುಂಭಾಗದಲ್ಲಿರುವ ನೀರಿನ ಟ್ಯಾಂಕ್​ ನಲ್ಲಿ ತನ್ನಿಬ್ಬರು ಮಕ್ಕಳನ್ನು ಮುಳುಗಿಸಿ ಕೊಂದು ಬಳಿಕತಾನೂ ನೀರಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಘಟನೆ ಸಂಬಂಧ ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video