ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾ ಅಬ್ಬರ: ಬೆಂಗಳೂರಿನಲ್ಲಿ 753 ಸೇರಿ 3,222 ಪ್ರಕರಣ ಪತ್ತೆ, 93 ಮಂದಿ ಸಾವು!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 3,222 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,40,428ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 3,222 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,40,428ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 93 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 34,929ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 753 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,12,746ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 16 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 14,724 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 27,19,479ಕ್ಕೆ ಏರಿಕೆಯಾಗಿದೆ. ಇನ್ನು 85,997 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,26,670 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 3,222 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 2.54ಕ್ಕೆ ಇಳಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!