ರಾಜ್ಯ

ಕೋವಿಡ್‌ ಎಫೆಕ್ಟ್: ಕರ್ನಾಟಕದಲ್ಲಿ 56 ಮಕ್ಕಳು ಅನಾಥ

Manjula VN

ಬೆಂಗಳೂರು: ಕೋವಿಡ್‌ 2ನೇ ಅಲೆ ಹಲವು ಕುಟುಂಬಗಳ ಖುಷಿ ಕಸಿದುಕೊಂಡಿದೆ. ಈ ಪಿಡುಗಿನಿಂದಾಗಿ ಪಾಲಕರನ್ನು ಕಳೆದುಕೊಂಡು ಅನಾಥರಾಗುತ್ತಿರುವ ಮಕ್ಕಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಈವರೆಗೆ ಒಟ್ಟು 56 ಮಂದಿ ಮಕ್ಕಳು ಹೆತ್ತವರನ್ನು ಕಳೆದುಕೊಂಡಿದ್ದಾರೆಂದು ತಿಳಿದುಬಂದಿದೆ. 

ಚಿಕ್ಕಬಳ್ಳಾಪುರದಲ್ಲಿ 9 ಮಕ್ಕಳು ತಬ್ಬಲಿಗಳಾಗಿದ್ದಾರೆ. ಬೀದರ್ ನಲ್ಲಿ 5, ಕೊಡಗು ಮತ್ತು ರಾಯಚೂರಿನಲ್ಲಿ ತಲಾ 4 ಮಕ್ಕಳು ಅನಾಥರಾಗಿದ್ದಾರೆ.

ಬಾಗಲಕೋಟೆ, ದಕ್ಷಿಣ ಕನ್ನಡ, ಧಾರವಾಡ ಮತ್ತು ಕೋಲಾರದಲ್ಲಿ ತಲಾ ಇಬ್ಬರು ಮಕ್ಕಳು ಪೋಷಕರನ್ನು ಕಳೆದುಕೊಂಡಿದ್ದಾರೆ, ಬೆಂಗಳೂರು ನಗರ, ಮೈಸೂರು, ರಾಮನಗರ, ಚಿಕ್ಕಮಗಳೂರು, ಹಾಸನ, ಗದಗ, ಬೆಳಗಾವಿ, ಯಾದಗಿರಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಮನೆಯ ಆಧಾರಸ್ಥಂಭವಾಗಿದ್ದ ಅಪ್ಪ, ಅಮ್ಮನನ್ನು ಕಳೆದುಕೊಂಡಿದ್ದಾರೆ.

ಪೋಷಕರನ್ನು ಕಳೆದುಕೊಂಡಿರುವ ಈ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗಳ (ಸಿಡಬ್ಲ್ಯೂಸಿ) ಮುಂದೆ ಹಾಜರುಪಡಿಸಲಾಗಿದ್ದು, ನಂತರ ಅವರ ವಿಸ್ತೃತ ಕುಟುಂಬಗಳಿಗೆ ಹಸ್ತಾಂತರಿಸಲಾಯಿತು.

ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಸಿಡಬ್ಲ್ಯೂಸಿ ನಿಕಟವಾಗಿ ಮೇಲ್ವಿಚಾರಣೆ ನಡೆಸಲಿದೆ. 

ಅನಾಥ ಮಕ್ಕಳಿಗಾಗಿ ರಾಜ್ಯ ಸರ್ಕಾರವು ‘ಬಾಲಸೇವಾ ಯೋಜನೆ’ ಜಾರಿಗೆ ತರಲಿದ್ದು, ಮಾಸಿಕ ರೂ.3,500 ನೆರವು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಘೋಷಿಸಿದ್ದಾರೆ. ಆದರೆ, ಈ ಯೋಜನೆ ಇನ್ನೂ ಜಾರಿಗೆ ಬಂದಿಲ್ಲ.

SCROLL FOR NEXT