ರಾಜ್ಯ

ಕೋವಿಡ್-19: ರಾಜ್ಯದ 27 ಜಿಲ್ಲೆಗಳಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.2.6ಕ್ಕೆ ಇಳಿಕೆ

Manjula VN

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆ ಬಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ರಾಜ್ಯ 27 ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆ ದಾಖಲಾಗಿದೆ. 

ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ರಾಜ್ಯದ 27 ಜಿಲ್ಲೆಗಳಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.2.62ಕ್ಕೆ ಇಳಿಕೆಯಾಗಿದೆ. ಈ ನಡುವೆ ಚೇತರಿಕೆ ಪ್ರಮಾಣ ಶೇ.95.33ಕ್ಕೆ ಏರಿಕೆಯಾಗಿದೆ. 

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಆರೋಗ್ಯ ಸಚಿವ ಸುಧಾಕರ್ ಅವರು, ಕೊಡಗು, ಮೈಸೂರು, ಹಾಸನ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ಶೇ.5ಕ್ಕಿಂತ ಹೆಚ್ಚು ಪಾಸಿಟಿವಿಟಿ ಪ್ರಮಾಣವಿದೆ. ಉಳಿದೆಲ್ಲಾ ಜಿಲ್ಲೆಗಳಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.5ಕ್ಕಿಂತ ಕಡಿಮೆಯಿದೆ ಎಂದು ಹೇಳಿದ್ದಾರೆ. 

ಪರೀಕ್ಷಾ ಪ್ರಮಾಣದಲ್ಲಿ ಉತ್ತರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳ ಬಳಿಕ ರಾಜ್ಯ ಮೂರನೇ ಸ್ಥಾನ ಪಡೆದುಕೊಂಡಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ 3,36,73,395 ಪರೀಕ್ಷೆಗಳನ್ನು ನಡೆಸಲಾಗಿದೆ. ಕಳೆದ 24 ಗಂಟೆಗಳಲ್ಲಿ 11 ಜಿಲ್ಲೆಗಳಲ್ಲಿ ಯಾವುದೇ ಸಾವುಗಳೂ ವರದಿಯಾಗಿಲ್ಲ ಎಂದು ತಿಳಿಸಿದ್ದಾರೆ. 

SCROLL FOR NEXT