ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕಾಸರಗೋಡು ಗ್ರಾಮಗಳಿಗೆ ಮಲಯಾಳಂ ಹೆಸರು: ಕೇರಳದ ಸ್ಪಷ್ಟನೆ ಸಮಾಧಾನ ಮೂಡಿಸಿದೆ ಎಂದ ಎಚ್‌ಡಿಕೆ

ಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರಿನ ಮಲಯಾಳೀಕರಣ ವಿಚಾರವಾಗಿ ಕೇರಳ ಸರ್ಕಾರ ನೀಡಿರುವ ಸ್ಪಷ್ಟನೆ ಸಮಾಧಾನ ಮೂಡಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ
Manjula VN
Updated On : 29 Jun 2021, 1:56 pm

ಬೆಂಗಳೂರು: ಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರಿನ ಮಲಯಾಳೀಕರಣ ವಿಚಾರವಾಗಿ ಕೇರಳ ಸರ್ಕಾರ ನೀಡಿರುವ ಸ್ಪಷ್ಟನೆ ಸಮಾಧಾನ ಮೂಡಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರಿನ ಮಲಯಾಳೀಕರಣ ವಿಚಾರ ಮುನ್ನೆಲೆಗೆ ಬರುವುದರ ಹಿಂದೆ ಯಾವ ತಂತ್ರವಿತ್ತೋ ತಿಳಿಯದು. ಆದರೆ, ‘ಕನ್ನಡ, ಕನ್ನಡಿಗ, ಕರ್ನಾಟಕ‘ಕ್ಕೆ ಏನೋ ಅಪಚಾರವಾಗುತ್ತಿದೆ ಎಂದು ಭಾವಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆಯಲಾಯಿತು. ಆದರೆ, ಅಂಥ ಪ್ರಸ್ತಾವ ಇಲ್ಲ ಎಂಬ ಕೇರಳದ ಸ್ಪಷ್ಟನೆಯು ಸಮಾಧಾನ ಮೂಡಿಸಿದೆ ಎಂದು ಹೇಳಿದ್ದಾರೆ. 

ಕಾಸರಗೋಡಿನಲ್ಲಿ ಕನ್ನಡಕ್ಕೆ ದಕ್ಕೆಯಾದರೆ ಹೋರಾಟ ನಡೆಸುವುದಾಗಿಯೂ, ಅದರ ನೇತೃತ್ವ ತಾವೇ ವಹಿಸುವುದಾಗಿಯೂ ಮಂಜೇಶ್ವರದ ಶಾಸಕ ಹೇಳಿದ್ದಾರೆ. ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಅಭಿಮಾನ ಮೆರೆದಿದ್ದ ಅಶ್ರಫ್‌ ಹೇಳಿಕೆಯು ಮತ್ತಷ್ಟು ಸಮಾಧಾನ ತಂದಿದೆ. ಕನ್ನಡಪರವಾದ ನಿಲುವು ಪ್ರಕಟಿಸಿರುವ ಅಶ್ರಫ್‌ ಅವರನ್ನು ಅಭಿನಂದಿಸುತ್ತೇನೆ ಎಂದು ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

Advertisement

Advertisement

ಭಾಷಾ ಸಾಮರಸ್ಯದ ವಿಚಾರದಲ್ಲಿ ಕರ್ನಾಟಕ–ಕೇರಳ ರಾಜ್ಯಗಳು ಪರಸ್ಪರ ಪೂರಕವಾಗಿ ನಡೆದುಕೊಂಡು ಬಂದಿವೆ. ಆದರೂ ಹೆಸರು ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದ್ದು ಹೇಗೆ, ಇದಕ್ಕೆ ಕಾರಣಗಳೇನು ಎಂಬುದನ್ನು ಪತ್ತೆ ಹಚ್ಚಬೇಕು. ಈ ಪ್ರಯತ್ನವು ಸಾಮರಸ್ಯವನ್ನು ಕೆಡಿಸುವ ಉದ್ದೇಶವನ್ನೇ ಹೊಂದಿದ್ದರೆ ಎರಡೂ ರಾಜ್ಯಗಳು ಜಾಗೃತರಾಗಬೇಕಾದ ಅಗತ್ಯವಿದೆ.

ಕಾಸರಗೋಡು ಗ್ರಾಮಗಳ ಹೆಸರುಗಳ ಮಲಯಾಳೀಕರಣವನ್ನು ವಿರೋಧಿಸುವ ಮೂಲಕ ಕನ್ನಡಿಗರು ಕನ್ನಡದ ವಿಚಾರದಲ್ಲಿ ಮತ್ತೊಮ್ಮೆ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಈ ಬಗ್ಗೆ ಅತಿ ಶೀಘ್ರದಲ್ಲೇ ಕೇರಳ ಸರ್ಕಾರದಿಂದ ಸ್ಪಷ್ಟನೆ ಬರುವಂತೆ ಮಾಡಿದ್ದಾರೆ. ಈ ಸಾತ್ವಿಕ ಹೋರಾಟದಲ್ಲಿ ಭಾಗಿಯಾದ ಕನ್ನಡಿಗರಿಗೆ ಕುಮಾರಸ್ವಾಮಿಯವರು ಅಭಿನಂದನೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments