ರಾಜ್ಯ

ರಾಜ್ಯದಲ್ಲಿ ಲಸಿಕೆ ಕೊರತೆ ಇಲ್ಲ, ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಮಾಣದ ಲಸಿಕೆ ಲಭ್ಯ: ಸಚಿವ ಡಾ. ಕೆ.ಸುಧಾಕರ್

Srinivasamurthy VN

ಬೆಂಗಳೂರು: ರಾಜ್ಯದಲ್ಲಿ ಲಸಿಕೆ ಕೊರತೆ ಇಲ್ಲ, ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಮಾಣದ ಲಸಿಕೆಗಳು ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಲಸಿಕೆ ಕೊರತೆ ಇಲ್ಲ. ರಾಜ್ಯಕ್ಕೆ ನಿರಂತರವಾಗಿ ಲಸಿಕೆ ಪೂರೈಕೆಯಾಗುತ್ತಿದೆ. ಆದರೆ ಪ್ರತಿನಿತ್ಯ 10 ಲಕ್ಷ ಡೋಸ್ ನೀಡುವ ಕೆಲಸ ಆಗುತ್ತಿಲ್ಲ ಎಂದು ಹೇಳಿದರು. 

ಈ ಕುರಿತಂತೆ ಮುಂದಿನವಾರ ನಾನು ದೆಹಲಿಗೆ ತೆರಳಿ ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಮತ್ತು ಇತರೆ ಸಚಿವರು ಅಧಿಕಾರಗೊಳನ್ನು ಭೇಟಿಯಾಗಿ ಅವರೊಂದಿಗೆ ಚರ್ಚಿಸುತ್ತೇನೆ. 

ಕಲ್ಯಾಣ ಮಂಟಪಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆ
ಇದೇ ವೇಳೆ ಕಲ್ಯಾಣ ಮಂಟಪಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಕುರಿತು ಮಾತನಾಡಿದ ಸಚಿವರು, ಈ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಮನೆಗಳಲ್ಲಿ ಜಾಗ ಸಾಕಾಗುವುದಿಲ್ಲವೆಂದು ಕಲ್ಯಾಣ ಮಂಟಪಗಳಲ್ಲಿ ಅನುಮತಿ ನೀಡಲಾಗಿದೆ. ಆದರೆ ಕಲ್ಯಾಣ ಮಂಟಪಗಳಲ್ಲಿ ಹೆಚ್ಚು ಜನರನ್ನ ಸೇರಿಸಲಾಗುತ್ತಿದ್ದು,  ಕೋವಿಡ್ ನಿಯಮ ಉಲ್ಲಂಘನೆಯಾಗುತ್ತಿದೆ. ಇದಕ್ಕೆ ಜಿಲ್ಲಾಧಿಕಾರಿಗಳು ಅಧಿಕಾರಿಗಳನ್ನ ಹೊಣೆಹಗಾರರನ್ನಾಗಿಸುವ ಕೆಲಸ ಮಾಡಬೇಕು. ಈ ಸಂಬಂಧ ಸಿಎಂ ಬಿಎಸ್ ವೈ ಮತ್ತು ಸಿಎಸ್ ಗೆ ಮನವಿ ಮಾಡುತ್ತೇನೆ. ಕೋವಿಡ್ ನಿಯಮ ಉಲ್ಲಂಘಿಸುವ ಕಲ್ಯಾಣ ಮಂಟಪಗಳ ವಿರುದ್ಧವೇ ಕ್ರಮ ಕೈಗೊಳ್ಳುವ ಕುರಿತು  ಚಿಂತನೆ ನಡೆಸಲಾಗುತ್ತದೆ. ಹೆಚ್ಚಿನ ಪ್ರಮಾಣದ ಲಸಿಕೆ ಪೂರೈಕೆಗಾಗಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ಆತುರದಿಂದ ಶಾಲಾ-ಕಾಲೇಜು ಆರಂಭ ಬೇಡ
ಆತುರದಿಂದ ಶಾಲಾ-ಕಾಲೇಜುಗಳ ಆರಂಭ ಬೇಡ. ಶಾಲೆ ಆರಂಭದ ಬಗ್ಗೆ ಎಚ್ಚರಿಕೆಯ ಹೆಜ್ಜೆ ಇಡಬೇಕು. ಸರ್ಕಾರ ಶಾಲಾ-ಕಾಲೇಜು ಆರಂಭದ ಕುರಿತು ದಿಢೀರ್ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು.

SCROLL FOR NEXT