ಸಂಗ್ರಹ ಚಿತ್ರ 
ರಾಜ್ಯ

ಪಿಂಚಣಿದಾರರ ಪತ್ತೆಗೆ ಮೊಬೈಲ್ ಆ್ಯಪ್ ಬಳಕೆ ಮಾಡಲಾಗುತ್ತಿದೆ: ಹೈಕೋರ್ಟ್'ಗೆ ಸರ್ಕಾರ ಮಾಹಿತಿ

ಫಲಾನುಭವಿಗಳ ಗುರ್ತಿಸಲು ರಾಜ್ಯ ಸರ್ಕಾರ ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಿದ್ದು, ಪಿಂಚಣಿ ಪಡೆಯಲು ಪಿಂಚಣಿದಾರರು ಯಾವುದೇ ಕಚೇರಿಗೂ ಭೇಟ ನೀಡುವ ಅಗತ್ಯವಿಲ್ಲ ಎಂದು ಹೈಕೋರ್ಟ್'ಗೆ ರಾಜ್ಯ ಸರ್ಕಾರ ಸೋಮವಾರ ಮಾಹಿತಿ ನೀಡಿದೆ. 

ಬೆಂಗಳೂರು: ಫಲಾನುಭವಿಗಳ ಗುರ್ತಿಸಲು ರಾಜ್ಯ ಸರ್ಕಾರ ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಿದ್ದು, ಪಿಂಚಣಿ ಪಡೆಯಲು ಪಿಂಚಣಿದಾರರು ಯಾವುದೇ ಕಚೇರಿಗೂ ಭೇಟ ನೀಡುವ ಅಗತ್ಯವಿಲ್ಲ ಎಂದು ಹೈಕೋರ್ಟ್'ಗೆ ರಾಜ್ಯ ಸರ್ಕಾರ ಸೋಮವಾರ ಮಾಹಿತಿ ನೀಡಿದೆ. 

ಸಂಧ್ಯಾ ಸುರಕ್ಷಾ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ ಯೋಜನೆಯಡಿ ಹಿರಿಯ ನಾಗರಿಕರಿಗೆ ಸಕಾಲಕ್ಕೆ ಪಿಂಚಣಿ ಸಿಗುತ್ತಿಲ್ಲ ಎಂದು ಆಕ್ಷೇಪಿಸಿ ಅಖಿಲ ಕರ್ನಾಟಕ ವಯೋವೃದ್ಧರ ಒಕ್ಕೂಟ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನಿನ್ನೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದರು. 

ಈ ಸಂಬಂಧ ಅಫಿಡವಿಟ್‌ ಸಲ್ಲಿಸಿದ ಕಂದಾಯ ಇಲಾಖೆ ಉಪ ನಿರ್ದೇಶಕಿ (ಸಾಮಾಜಿಕ ಭದ್ರತೆ ಮತ್ತು ಪಿಂಚಣಿ) ಡಾ. ಎಸ್. ಸವಿತಾ ಅವರು, ನ್ಯಾಯಾಲಯ ಈ ಹಿಂದೆ ನೀಡಿದ್ದ ಆದೇಶಗಳ ಅನುಪಾಲನಾ ವರದಿಯನ್ನು ಪೀಠಕ್ಕೆ ಸಲ್ಲಿಸಿದರು.

ಹಿರಿಯ ನಾಗರಿಕರಿಗೆ ಜೀವಿತ ಪ್ರಮಾಣಪತ್ರ ಕೇಳುತ್ತಿಲ್ಲ. 2021ರ ಮೇ ವರೆಗೆ ಎಲ್ಲ ಹಿರಿಯ ನಾಗರಿಕರಿಗೆ ಪಿಂಚಣಿ ಮತ್ತು ವೃದ್ಧಾಪ್ಯ ವೇತನ ಪಾವತಿಸಲಾಗಿದೆ. ಸಾಮಾಜಿಕ ಭದ್ರತಾ ಯೋಜನೆಗಳಡಿ ಪಿಂಚಣಿ ಪಡೆಯಲು ಹಿರಿಯ ನಾಗರಿಕರು ಒಂದು ಕಚೇರಿಯಿಂದ ಮೊತ್ತೊಂದು ಕಚೇರಿಗೆ ಅಥವಾ ಬ್ಯಾಂಕುಗಳಿಗೆ ಭೇಟಿ ಕೊಡುವಂತಿಲ್ಲ ಎಂದು ವಿವರಿಸಿದರು.

ಪಿಂಚಣಿದಾರರನ್ನು ಸ್ವಯಂ ಪ್ರೇರಿತವಾಗಿ ಗುರುತಿಸಲು ‘ನವೋದಯ’ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಗ್ರಾಮ ಲೆಕ್ಕಿಗರು ಫಲಾನುಭವಿಗಳ ಮನೆ ಬಾಗಿಲಿಗೆ ಭೇಟಿ ನೀಡಿ ಅವರ ಭಾವಚಿತ್ರ ಸಹಿತ ಮಾಹಿತಿಗಳನ್ನು ಸಂಗ್ರಹಿಸಿ ಆ್ಯಪ್‌ನಲ್ಲಿ ಅಪ್‌ಲೋಡ್ ಮಾಡುತ್ತಿದ್ದಾರೆಂದು ತಿಳಿಸಿದರು. 

ಹೇಳಿಕೆ ದಾಖಲಿಸಿಕೊಂಡ ಪೀಠ,ಪಿಂಚಣಿದಾರರು ಬದುಕಿರುವ ಬಗ್ಗೆ ಪ್ರತಿವರ್ಷ ಪ್ರಮಾಣ ಪತ್ರ ಸಲ್ಲಿಸಬೇಕು ಮತ್ತು ಬ್ಯಾಂಕ್‌ಗಳಿಗೆ ಹಾಜರಾಗಬೇಕು. ಹಿರಿಯ ನಾಗರಿಕರನ್ನು ಬ್ಯಾಂಕ್ ಮತ್ತು ಕಚೇರಿಗಳಿಗೆ ಸುತ್ತಾಡಿಸುವುದು ಸರಿಯೇ’ ಎಂದು ಪ್ರಶ್ನಿಸಿತು.

ಅಲ್ಲದೆ, ಸಾಮಾಜಿಕ ಭದ್ರತಾ ಯೋಜನೆಗಳಡಿ ಪಿಂಚಣಿ ಪಡೆಯಲು ಹಿರಿಯ ನಾಗರಿಕರು ಒಂದು ಕಚೇರಿಯಿಂದ ಮೊತ್ತೊಂದು ಕಚೇರಿಗೆ ಅಥವಾ ಬ್ಯಾಂಕುಗಳಿಗೆ ಭೇಟಿ ಕೊಡುವಂತಿಲ್ಲ ಎಂಬ ಬಗ್ಗೆ ಖಚಿತ ಪ್ರಮಾಣಪತ್ರ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT