ರಾಜ್ಯ

ಬೆಂಗಳೂರಿನಲ್ಲಿ ಲಸಿಕೆ ಅಭಿಯಾನ ಮತ್ತಷ್ಟು ಚುರುಕು: ವಿಶೇಷ ಶಿಬಿರ ಆರಂಭಕ್ಕೆ ಬಿಬಿಎಂಪಿ ನಿರ್ಧಾರ

Manjula VN

ಬೆಂಗಳೂರು; ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್ ಲಸಿಕೆ ಅಭಿಯಾನವನ್ನು ಮತ್ತಷ್ಟು ಚುರುಕುಗೊಳಿಸಲು ಮುಂದಾಗಿರುವ ಬಿಬಿಎಂಪಿ ಅಧಿಕಾರಿಗಳು, ಇದಕ್ಕಾಗಿ ವಿಶೇಷ ಶಿಬಿರ ಆರಂಭಿಸಲು ಮುಂದಾಗಿದ್ದಾರೆ. 

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು, ಬಿಬಿಎಂಪಿ ವ್ಯಾಪ್ತಿಯ ವಯಸ್ಕರ ಜನಸಂಖ್ಯೆಯ ಶೇ.50ರಷ್ಟು ಜನರು ಲಸಿಕೆ ಪಡೆದಿದ್ದು, ಮುಂದಿನ ದಿನಗಳಲ್ಲಿ ವಿಶೇಷ ಶಿಬಿರಗಳ ಮೂಲಕ ಪ್ರತಿಯೊಬ್ಬರಿಗೂ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ. 

ಪಾಲಿಕೆ ವ್ಯಾಪ್ತಿಯಲ್ಲಿ ಲಸಿಕೆ ನೀಡುವ ಕಾರ್ಯಕ್ರಮವನ್ನು ಆದ್ಯತೆ ಮೇರೆಗೆ ಮಾಡಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಇಲ್ಲದ ವಾರ್ಡ್ ಗಳಲ್ಲಿ ತೆರೆದ ಜಾಗಗಳಲ್ಲಿ (ಮೈದಾನ) ಲಸಿಕೆ ನೀಡುವ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. 

45 ವರ್ಷ ಮೇಲ್ಪಟ್ಟವರಲ್ಲದೇ 18 ರಿಂದ 44 ವರ್ಷದೊಳಗಿನ ಆಯ್ದ 30 ವರ್ಗಗಳಿಗೆ ಅವರು ಕೆಲಸ ಮಾಡುವ ಸ್ಥಳಗಳಿಗೆ ಹೋಗಿ ವಿಶೇಷ ಶಿಬಿರ ಆಯೋಜಿಸಿ ಲಸಿಕೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹತ್ತಿರ ಇಲ್ಲದೇ ಲಸಿಕೆ ಪಡೆಯದವರ ಪಟ್ಟಿ ಮಾಡಲು ಮನೆ ಬಾಗಿಲಿಗೆ ಹೋಗಿ ಸರ್ವೇ ಮಾಡುತ್ತಿದ್ದೇವೆ. ಯಾವ ಏರಿಯಾದಿಂದ ಯಾರು ಬಂದಿಲ್ಲ? ಲಸಿಕೆ ಯಾವ ಕಾರಣಕ್ಕೆ ಪಡೆದಿಲ್ಲ ಎಂಬುದನ್ನು ತಿಳಿದುಕೊಳ್ಳುತ್ತಿದ್ದು, ಅವರಿರುವ ಜಾಗದಲ್ಲೇ ವಿಶೇಷ ಶಿಬಿರ ಆಯೋಜಿಸಲು ಸರ್ವ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆಂದು ತಿಳಿಸಿದ್ದಾರೆ. 

SCROLL FOR NEXT