ಕೊರೋನಾ ವಿರುದ್ಧ ಲಸಿಕೆಯೇ ನಮ್ಮ ಸುರಕ್ಷಾ ಕವಚ: ಸಿಎಂ ಯಡಿಯೂರಪ್ಪ
ಕೊರೋನಾ ವಿರುದ್ಧ ಲಸಿಕೆಯೇ ನಮ್ಮ ಸುರಕ್ಷಾ ಕವಚವಾಗಿದೆ. ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಿರಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ.
ಬೆಂಗಳೂರು: ಕೊರೋನಾ ವಿರುದ್ಧ ಲಸಿಕೆಯೇ ನಮ್ಮ ಸುರಕ್ಷಾ ಕವಚವಾಗಿದೆ. ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಿರಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೊರೋನಾ ವಿರುದ್ಧ ಲಸಿಕೆಯೇ ನಮ್ಮ ಸುರಕ್ಷಾ ಕವಚವಾಗಿದೆ. ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಸೂಚನೆಗಳಂತೆ, ಆದ್ಯತೆಯ ಮೇರೆಗೆ ಲಸಿಕೆ ನೀಡಲಾಗುತ್ತಿದೆ. ಅರ್ಹರು ನೋಂದಣಿ ಮಾಡಿಸಿಕೊಂಡು, ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಿರಿ. ಸರ್ಕಾರದೊಂದಿಗೆ ಸಹಕರಿಸಿ, ಎಲ್ಲಾ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.
18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಿಕೆ ಇಂದಿನಿಂದ ಆರಂಭವಾಗಲಿದ್ದು, ದೇಶವನ್ನು ಕೊರೋನಾದಿಂದ ಮುಕ್ತ ಮಾಡುವತ್ತ ಇದು ಪ್ರಮುಖ ಹೆಜ್ಜೆಯಾಗಿದೆ. ಆದರೆ, ಲಸಿಕೆ ಕೊರತೆಯ ಕಾರಣ ಕೆಲವೇ ರಾಜ್ಯಗಳಲ್ಲಿ ಈ ಅಭಿಯಾನ ಮೇ.1ರಿಂದ ಆರಂಭವಾಗಲಿದ್ದು, ಉಳಿದ ರಾಜ್ಯಗಳಲ್ಲಿ ವಿಳಂಬವಾಗಲಿದೆ ಎಂದು ಹೇಳಲಾಗುತ್ತಿದೆ.