ರಾಜ್ಯ

ಕರ್ನಾಟಕ ಉಪಚುನಾವಣೆ ಫಲಿತಾಂಶ: ಬಸವಕಲ್ಯಾಣ ವಿಧಾನಸಭೆ, ಬೆಳಗಾವಿ ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿಗೆ ಮುನ್ನಡೆ

Srinivas Rao BV

ಬೆಂಗಳೂರು: ಕರ್ನಾಟಕದ ಎರಡು ವಿಧಾನಸಭೆ, ಒಂದು ಲೋಕಸಭೆಗೆ ನಡೆದ ಉಪಚುನಾವಣೆಯ ಪೈಕಿ ಬಿಜೆಪಿಗೆ ಒಂದು ಕ್ಷೇತ್ರದಲ್ಲಿ ಮುಖಭಂಗ ಉಂಟಾಗಿದ್ದರೆ, ಉಳಿದ ಎರಡರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 

ಮಸ್ಕಿ, ಬಸವಕಲ್ಯಾಣದ ವಿಧಾನಸಭೆ ಕ್ಷೇತ್ರಗಳಿಗೆ ಹಾಗೂ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. 

ಈ ಪೈಕಿ ಮಸ್ಕಿಯಲ್ಲಿ ಬಿಜೆಪಿಗೆ ಮುಖಭಂಗ ಉಂಟಾಗಿದ್ದರೆ, ಬಸವಕಲ್ಯಾಣ ಹಾಗೂ ಬೆಳಗಾವಿಯಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಸವಕಲ್ಯಾಣದಲ್ಲಿ ಶರಣು ಸಲಗಾರ್ ಕಾಂಗ್ರೆಸ್ ನ ತಮ್ಮ ಎದುರಾಳಿ ಅಭ್ಯರ್ಥಿ ಮಾಲಾ ಬಿ ನಾರಾಯಣ ರಾವ್ ಅವರ ವಿರುದ್ಧ 5,732 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. 

ಮಸ್ಕಿಯಲ್ಲಿ ಕಾಂಗ್ರೆಸ್ ನ ಬಸನಗೌಡ ತುರುವಿಹಾಳ್ ಬಿಜೆಪಿಯ ಪ್ರತಾಪ್ ಗೌಡ ಪಾಟೀಲ್ ವಿರುದ್ಧ 11416 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. 

ಬೆಳಗಾವಿಯಲ್ಲಿ ಸುರೇಶ್ ಅಂಗಡಿ ಪತ್ನಿ ಎದುರಾಳಿ ಸತೀಶ್ ಜಾರಕಿಹೊಳಿ ವಿರುದ್ಧ ಮುನ್ನಡೆ ಕಾಯ್ದುಕೊಂಡಿದ್ದು, ಶೇ.44.39 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ನ ಅಭ್ಯರ್ಥಿ ಶೇ.41.20 ರಷ್ಟು ಮತಗಳನ್ನು ಪಡೆದಿದ್ದಾರೆ, ನೋಟಾಗೆ ಶೇ.1.09 ರಷ್ಟು ಮತ, ಇತರರಿಗೆ ಶೇ.13.31 ರಷ್ಟು ಮತಗಳು ಈ ವರೆಗೂ ಬಂದಿವೆ, ಮತ ಎಣಿಕೆ ಪ್ರಗತಿಯಲ್ಲಿದೆ.

SCROLL FOR NEXT