ಯಡಿಯೂರಪ್ಪ 
ರಾಜ್ಯ

ಜಿಲ್ಲಾಸ್ಪತ್ರೆಗಳ ಸ್ಥಿತಿಗತಿ ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸಲು ಸಿಎಂ ಸೂಚನೆ

 ಸರ್ಕಾರ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಲಭ್ಯವಿರುವ ಔಷಧಿ ಆಕ್ಸಿಜನ್ ಸೇರಿದಂತೆ ಇತರೆ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದು ವರದಿ ತರಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ."

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆ ಸೇರಿದಂತೆ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಒಂದೇ ದಿನ 22 ಮಂದಿ ಮೃತಪಟ್ಟ ಘಟನೆಯಿಂದ ಎಚ್ಚೆತ್ತುಕೊಂಡಿರುವ ಸರ್ಕಾರ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಲಭ್ಯವಿರುವ ಔಷಧಿ ಆಕ್ಸಿಜನ್ ಸೇರಿದಂತೆ ಇತರೆ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದು ವರದಿ ತರಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ."

ಅಧಿಕೃತ ನಿವಾಸ ಕಾವೇರಿಯಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,ಆಕ್ಸಿಜನ್ ತಯಾರಿಕೆ ಮತ್ತು ಪೂರೈಕೆ ಮಾಹಿತಿ ಸಂಬಂಧ  ಚರ್ಚೆ ನಡೆಸಿದರು. ಸಭೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು.

ಚಾಮರಾಜನಗರ ಜಿಲ್ಲೆಯಲ್ಲಿ ನಡೆದಂತಹ ಘಟನೆ ಬೇರೆ ಯಾವುದೇ ಜಿಲ್ಲೆಯಲ್ಲಿ ಮರುಕಳಿಸದಂತೆ ನೋಡಿಕೊಳ್ಳಬೇಕು. ಮೆಡಿಸಿನ್ ಕೊರತೆಯೂ ಎದುರಾಗದಂತೆ ಕ್ರಮ ಕೈಗೊಳ್ಳಬೇಕೆಂದು ಚರ್ಚಿಸಿದರು. ಜಿಲ್ಲಾ ಆಸ್ಪತ್ರೆಗಳ ಸ್ಥಿತಿ ಗತಿ ಬಗ್ಗೆ ವರದಿ ಸಂಗ್ರಹ ಮಾಡುವಂತೆ ಅಧಿಕಾರಿಗಳಿಗೆ ಸಭೆಯಲ್ಲಿ ಸಿಎಂ ಸೂಚನೆ ನೀಡಿದರು. ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!