ಸಂಗ್ರಹ ಚಿತ್ರ 
ರಾಜ್ಯ

ಕೊಡಗು: ಚಿಕಿತ್ಸೆ ನೀಡಿಕೆಯಲ್ಲಿ ವಿಳಂಬ ಆರೋಪ; ರೋಗಿ ಸಂಬಂಧಿಕರಿಂದ ವೈದ್ಯರ ಮೇಲೆ ಹಲ್ಲೆ

ಚಿಕಿತ್ಸೆ ನೀಡಿಕೆಯಲ್ಲಿ ವಿಳಂಬ ಮಾಡಿದ ಆರೋಪ ಹೊರಿಸಿ ರೋಗಿಯ ಸಂಬಂಧಿಕರು ವೈದ್ಯರ ಮೇಲೆ ಮಾಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಮಡಿಕೇರಿ: ಚಿಕಿತ್ಸೆ ನೀಡಿಕೆಯಲ್ಲಿ ವಿಳಂಬ ಮಾಡಿದ ಆರೋಪ ಹೊರಿಸಿ ರೋಗಿಯ ಸಂಬಂಧಿಕರು ವೈದ್ಯರ ಮೇಲೆ ಮಾಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ದೇಶದೆಲ್ಲೆಡೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರೋಗಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ಚಿಕಿತ್ಸೆ ನೀಡಲು ವೈದ್ಯರು ಸಿಬ್ಬಂದಿ ಕೊರತೆ ತೀವ್ರವಾಗಿದೆ. ಇದರ ನಡುವೆಯೇ ಚಿಕಿತ್ಸೆ ನೀಡಿಕೆಯಲ್ಲಿ ವಿಳಂಬ ಮಾಡಿದ ಆರೋಪ ಹೊರಿಸಿ ರೋಗಿಯ ಸಂಬಂಧಿಕರು ವೈದ್ಯರ ಮೇಲೆ  ಮಾಡಿದ್ದಾರೆ. ಮಡಿಕೇರಿಯಲ್ಲಿ ಈ ಘಟನೆ ನಡೆದಿದ್ದು, ಮಡಿಕೇರಿಯ ವೀರಾಜಪೇಟೆ ತಾಲೂಕಿನ ತಿತಿಮತಿ ಪ್ರಾಥಮಿಕ ಆರೋಗ್ಯ ಕೇಂದ್ರದ ವಿವೇಕಾನಂದ ಪ್ರತಿಷ್ಠಾನದ ಆಸ್ಪತ್ರೆ ವೈದ್ಯ ಡಾ.ಜಿ ಹೊಸಮನಿ (70 ವರ್ಷ) ಅವರ ಮೇಲೆ ರೋಗಿಯ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ವೈದ್ಯರ ಕೈ ಮೂಳೆ  ಮುರಿದಿದ್ದು, ಅವರನ್ನು ಗೋಣಿಕೊಪ್ಪಲಿನ ಅಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಏನಿದು ಘಟನೆ
ಇಂದು ತಿತಿಮತಿ ಗ್ರಾಮದ ಸೈಯದ್ ಎಂಬವರ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದರು. ಅಷ್ಟೇ ಅಲ್ಲದೇ ಮಧ್ಯಾಹ್ನ 2:30ರ ಸುಮಾರಿಗೆ ಪ್ರಜ್ಞೆ ತಪ್ಪಿದ್ದಾರೆ. ಹೀಗಾಗಿ ಸೈಯದ್ ಹಾಗೂ ಆತನ ಸ್ನೇಹಿತರು ಚಿಕಿತ್ಸೆಗೆ ಅಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯಿಂದ  ಮಹಿಳೆಯನ್ನು ಯಾರು ಸರಿಯಾಗಿ ಗಮನಿಸಿಲ್ಲ. ಹೀಗಾಗಿ ಸ್ಥಳದಲ್ಲೇ ಇದ್ದ ಸೈಯದ್ ಫಿರೋಜ್ ಸಮೀರ್ ವೈದ್ಯರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಅಷ್ಟೇ ಅಲ್ಲ ಮಾತಿಗೆ ಮಾತು ಬೆಳೆದು ಹಲ್ಲೆಗೆ ಮುಂದಾಗಿದ್ದಾರೆ. ಖಾಸಗಿ ವೈದ್ಯ ಡಾ.ಜಿ ಹೊಸಮನಿ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ವೈದ್ಯರ  ಕೈ ಮೂಳೆ ಮುರಿದಿದೆ. ಬಳಿಕ ಹೊಸಮನಿ ಅವರಿಗೆ ಗೋಣಿಕೊಪ್ಪಲಿನ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹಲ್ಲೆ ನಡೆಸಿದ ಮರಪಾಲದ ಫಿರೋಜ್, ಸಮೀರ್, ಎಡತೊರೆ ಸೈಯದ್‍ಆಲವಿ ಎಂಬವರನ್ನು ಗೋಣಿಕೋಪ್ಪ ಪೊಲೀಸರು ಬಂಧಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Repo Rate ಶೇ. 5.25 ಯಥಾಸ್ಥಿತಿ ಮುಂದುವರಿಕೆ, GDP ಬೆಳವಣಿಗೆ ಶೇ. 6.7: RBI ವಿತ್ತೀಯ ನೀತಿ ಪ್ರಕಟ

Hormuz ಜಲಸಂಧಿ ಬಿಕ್ಕಟ್ಟು ಶೀಘ್ರದಲ್ಲೇ ಅಂತ್ಯ: ಅಂತಿಮ ಘಟ್ಟದಲ್ಲಿ ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಇಂದೇ ಅಧಿಕೃತ ಘೋಷಣೆ ಸಾಧ್ಯತೆ..!

ಶಾಕ್ ಕೊಟ್ಟ ಸರ್ಕಾರ: ಡೈರಿಯೇತರ ಪನೀರ್ ಗೆ ಒಂದು ವರ್ಷದ ನಿಷೇಧ, ವ್ಯಾಪಾರಿಗಳು ಬೇಸ್ತು! ಕಾರಣ ಏನು?

Yemen ಕರಾವಳಿಯಲ್ಲಿ ಭಾರತೀಯ ಧ್ವಜದ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ; ಸಮುದ್ರದಲ್ಲಿ ಮುಳುಗಿದ ಹಡಗು, 13 ಮಂದಿ ಭಾರತೀಯರು ಸೇರಿ ಎಲ್ಲಾ 14 ಸಿಬ್ಬಂದಿ ರಕ್ಷಣೆ..!

Hormuz ಜಲಸಂಧಿ ವಿವಾದ: 'ನಮ್ಮ ಒಪ್ಪಿಗೆ ಇಲ್ಲದೆ ಹಡಗು ಸಂಚಾರಕ್ಕೆ ಅವಕಾಶವೇ ಇಲ್ಲ'; ಯಾರ ಅನುಮತಿ ಬೇಕಿಲ್ಲ ಎಂದ ಅಮೆರಿಕಕ್ಕೆ Iran ತಿರುಗೇಟು..!