ಗೃಹ ಸಚಿವ ಬಸವರಾಜ ಬೊಮ್ಮಾಯಿ 
ರಾಜ್ಯ

ಚಾಮರಾಜನಗರ ರೋಗಿಗಳ ಸಾವಿನ ಪ್ರಕರಣ: ವರದಿ ನೀಡುವಂತೆ ಗೃಹ ಸಚಿವ ಬೊಮ್ಮಾಯಿ ಸೂಚನೆ

ಚಾಮರಾಜನಗರ ಆಸ್ಪತ್ರೆಯಲ್ಲಿ ರೋಗಿಗಳ ಸಾವಿನ ಪ್ರಕರಣ ಕುರಿತು  ಸಮಗ್ರ ತನಿಖೆ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ  ನೀಡಿರುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು: ಚಾಮರಾಜನಗರ ಆಸ್ಪತ್ರೆಯಲ್ಲಿ ರೋಗಿಗಳ ಸಾವಿನ ಪ್ರಕರಣ ಕುರಿತು ಸಮಗ್ರ ತನಿಖೆ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ
ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಸೋಮವಾರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಹಮ್ಮಿಕೊಂಡಿದ್ದ ರಾಸಾಯನಿಕ ಸಿಂಪರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚಾಮರಾಜನಗರದಲ್ಲಿ ಆಕ್ಸಿಜನ್ ಸಿಗದ ಹಿನ್ನೆಲೆಯಲ್ಲಿ ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ‌. ಆದರೆ ಇವರ ಸಾವಿಗೆ ನಿಜವಾಗಿಯೂ ಇದ್ದ ಕಾರಣ ಏನು ಎಂಬುದರ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ.  ಇದು ಅತ್ಯಂತ ದುಃಖಕರ ಸಂಗತಿ. ಈ ಘಟನೆ ಸಂಭವಿಸಬಾರದಾಗಿತ್ತು ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ಘಟನಾ  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ. ಪ್ರಕರಣದ ಕುರಿತು ಸತ್ಯಾಸತ್ಯತೆ ಏನು ಎಂಬುದನ್ನು ತಿಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವರದಿ ನೀಡಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು‌. 

ರಾಜ್ಯದಲ್ಲಿ ಆಕ್ಸಿಜನ್ ಬೇಡಿಕೆ ಹೆಚ್ಚುತ್ತಿದೆ. ಆದರೂ ಕೂಡ ನಮ್ಮ ಇತಿಮಿತಿಯಲ್ಲಿ ಆಕ್ಸಿಜನ್ ಪೂರೈಕೆಯನ್ನು ಎಲ್ಲಾ ಆಸ್ಪತ್ರೆಗಳಿಗೂ ಮಾಡಲಾಗುತ್ತದೆ. ಆ ಮೂಲಕ ಪರಿಸ್ಥಿತಿಯನ್ನು ಸಾಧ್ಯವಾದಷ್ಟು ನಿಭಾಯಿಸಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT