ರಾಜ್ಯ

ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತ: ತನಿಖೆಗೆ ರಾಜ್ಯ ಸರ್ಕಾರ ಆದೇಶ

Sumana Upadhyaya

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಮೃತಪಟ್ಟು ಘೋರ ದುರಂತ ಸಂಭವಿಸಿದ ಘಟನೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

ಆಕ್ಸಿಜನ್ ಕೊರತೆಯಿಂದ 24 ಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆಯಾದರೂ ಸಮಗ್ರ ಕೂಲಂಕಷ ತನಿಖೆ ನಡೆಸಲು ತೀರ್ಮಾನಿಸಿರುವ ರಾಜ್ಯ ಸರ್ಕಾರ, ಐಎಎಸ್ ಅಧಿಕಾರಿ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಿದೆ.

ಸರ್ಕಾರಕ್ಕೆ ಮೂರು ದಿನಗಳೊಳಗೆ ವರದಿ ಸಲ್ಲಿಸುವಂತೆ ಶಿವಯೋಗಿ ಕಳಸದ ಅವರಿಗೆ ಸರ್ಕಾರ ಸೂಚಿಸಿದೆ. 

ಆಕ್ಸಿಜನ್ ಪೂರೈಕೆ ಹೆಚ್ಚಳ: ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯಾದ್ಯಂತ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪೂರೈಕೆಯನ್ನು ಹೆಚ್ಚಿಸಲಾಗಿದೆ, ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಾದಷ್ಟು ಪ್ರಯತ್ನಿಸುತ್ತಿದ್ದೇವೆ. ಪರಿಸ್ಥಿತಿ ಸಹಜತೆಗೆ ತರಲು ಎಲ್ಲಾ ಸಾಧ್ಯತೆಗಳನ್ನು ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. 

SCROLL FOR NEXT