ರಾಜ್ಯ

ಕೂಡ್ಲಗಿ ತಾಲ್ಲೂಕಿನಲ್ಲಿ ಸಿಡಿಲು ಬಡಿದು ನಾಲ್ವರು ಸಾವು

Vishwanath S

ವಿಜಯನಗರ: ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ವಿವಿಧ ಪ್ರದೇಶಗಳಲ್ಲಿ ಮಂಗಳವಾರ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ.

ಮೊದಲ ಘಟನೆಯಲ್ಲಿ ಮೃತರನ್ನು ಚೆನ್ನಾಪುರಿ (40) ಮತ್ತು ವೀರಣ್ಣ (50) ಎಂದು ಗುರುತಿಸಲಾಗಿದ್ದು, ಹೊಲಗಳಲ್ಲಿ ದನ ಮೇಯಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೊಂದು ಘಟನೆಯಲ್ಲಿ, ಹರವಡಹಳ್ಳಿಯ ಜರ್ಮಹಳ್ಳಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಾಜಶೇಖರ್ (33) ತಮ್ಮ ಕೃಷಿ ಜಮೀನಿನಿಂದ ಹಿಂದಿರುಗುವಾಗ ಸಿಡಿಲು ಬಡಿದು ಸಾವನ್ನಪ್ಪಿದ್ದು, ಆತನ ಜೊತೆಗಿದ್ದ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ.

ಮೂರನೇ ಘಟನೆಯಲ್ಲಿ, ಅಯ್ಯನಹಳ್ಳಿ ಗ್ರಾಮದ ಪತ್ರೆಪ್ಪ ತನ್ನ ಕಿರಾಣಿ ಅಂಗಡಿ ಬಾಗಿಲು ಮುಚ್ಚುತ್ತಿದ್ದಾಗ ಸಿಡಲು ಬಡಿದು ಸಾವನ್ನಪ್ಪಿದ್ದಾರೆ.

ತಹಶೀಲ್ದಾರ್ ಮಹಾಬಲೇಶ್ವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

SCROLL FOR NEXT